ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ | ಅಪ್ರಾಪ್ತ ವಯಸ್ಕ ಸೇರಿದಂತೆ ಮೂವರ ಅರೆಸ್ಟ್ - Mahanayaka
4:29 AM Thursday 4 - December 2025

ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ | ಅಪ್ರಾಪ್ತ ವಯಸ್ಕ ಸೇರಿದಂತೆ ಮೂವರ ಅರೆಸ್ಟ್

13/02/2021

ಮಂಗಳೂರು: ನಗರದ ಲಾಲ್ ಭಾಗ್ ಬಳಿಯಲ್ಲಿ  ತಂಡವೊಂದು ಯುವಕನೋರ್ವನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಫೆ.7ರಂದು ರಾತ್ರಿ  ಸುಮಾರು 9:20ರ ವೇಳೆಗೆ ದೀಪಕ್ ಕುಮಾರ್ ಎಂಬ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿತ್ತು. ದ್ವಿಚಕ್ರ ವಾಹನದಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು  ದೀಪಕ್ ನ ಎಡಗೈ ಹಾಗೂ ಮುಂಗೈಗೆ ಮಾರಕಾಸ್ತ್ರಗಳಿಂದ ಇರಿದು ಹತ್ಯೆಗೆ ಯತ್ನಿಸಿದ್ದರು. ಈ ಸಂಬಂಧ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಉರ್ವಾ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಘಟನೆ ಸಂಬಂಧ 18 ವರ್ಷದ ಮೊಹಮ್ಮದ್ ಫಾಯಿಕ್, 19 ವರ್ಷದ ಮೊಹಮ್ಮದ್ ಶಾಹಿಲ್ ಹಾಗೂ ಇನ್ನೋರ್ವ ಅಪ್ರಾಪ್ತ ವಯಸ್ಕ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.

 

ಇತ್ತೀಚಿನ ಸುದ್ದಿ