ಕಂಬಳಕ್ಕೆ ವಿಶೇಷ ದೀಪ ಬೆಳಗಿಸಿ ಚಾಲನೆ ನೀಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್ - Mahanayaka

ಕಂಬಳಕ್ಕೆ ವಿಶೇಷ ದೀಪ ಬೆಳಗಿಸಿ ಚಾಲನೆ ನೀಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್

bengaluru
25/11/2023


Provided by

ಬೆಂಗಳೂರು: ಬೆಂಗಳೂರಿನಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ಕಂಬಳಕ್ಕೆ ವಿಶೇಷ ದೀಪ ಬೆಳಗಿಸುವ ಮೂಲಕ ಕರೆಯನ್ನು ಪುನೀತ್ ಪತ್ನಿ ಅಶ್ವಿನಿ ಉದ್ಘಾಟಿಸಿದರು.

ಇದೇ ವೇಳೆ ಜಮ್ಮು–ಕಾಶ್ಮೀರದ ರಜೆರಿಯಲ್ಲಿ ಉಗ್ರರೊಂದಿಗೆ ನಡೆದ ಕಾದಾಟದಲ್ಲಿ ಹುತಾತ್ಮರಾದ ಕ್ಯಾಪ್ಟನ್ ಪ್ರಾಂಜಲ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಡಿ.ವಿ ಸದಾನಂದಗೌಡ, ಸಂಗೀತ ನಿರ್ದೇಶಕ ಗುರುಕಿರಣ್, ಕಂಬಳ ಸಮಿತಿ ಅಧ್ಯಕ್ಷ, ಪುತ್ತೂರು ಶಾಸಕ ಆಶೋಕ್ ಕುಮಾರ್ ರೈ, ಶಾಸಕ ಗುರ್ಮೆ ಪ್ರಕಾಶ್ ಶೆಟ್ಟಿ ಸೇರಿದಂತೆ ಅನೇಕರು ಗಂಗಾರತಿಯಲ್ಲಿ ಭಾಗವಹಿಸಿದ್ದರು.

ಕಂಬಳಕ್ಕಾಗಿ ಅರಮನೆ ಮೈದಾನ ಸಂಪೂರ್ಣವಾಗಿ ಸಿದ್ಧಗೊಂಡಿದೆ. ಇಂದು ಮತ್ತು ನಾಳೆ ನಡೆಯಲಿರುವ ಕಂಬಳಕ್ಕೆ ಅನುಷ್ಕಾ ಶೆಟ್ಟಿ ರಿಷಬ್ ಶೆಟ್ಟಿ, ಪೂಜಾ ಹೆಗ್ಡೆ, ವಿವೇಕ್ ಒಬೆರಾಯ್, ಸೇರಿದಂತೆ ಹಲವು ತಾರೆಯರು ಮೆರಗು ನೀಡಲಿದ್ದಾರೆ.

ಇತ್ತೀಚಿನ ಸುದ್ದಿ