ತನ್ನ ಜೀವನವನ್ನೇ ಕೊನೆಗಾಣಿಸಿದ ಜಿಲ್ಲಾಧಿಕಾರಿ ಕಚೇರಿಯ ಮಹಿಳಾ ಎಸ್ ಡಿಎ ಅಧಿಕಾರಿ - Mahanayaka
1:34 AM Thursday 30 - October 2025

ತನ್ನ ಜೀವನವನ್ನೇ ಕೊನೆಗಾಣಿಸಿದ ಜಿಲ್ಲಾಧಿಕಾರಿ ಕಚೇರಿಯ ಮಹಿಳಾ ಎಸ್ ಡಿಎ ಅಧಿಕಾರಿ

hasana
25/11/2023

ಹಾಸನ: ಜಿಲ್ಲಾಧಿಕಾರಿ ಕಚೇರಿಯ ಮಹಿಳಾ ಎಸ್ ಡಿಎ ಅಧಿಕಾರಿಯೊಬ್ಬರು ತಮ್ಮ ನಿವಾಸದಲ್ಲೇ ನೇಣು ಬಿಗಿದು ಕೊಂಡು ಸಾವಿಗೆ ಶರಣಾಗಿರುವ ಘಟನೆ ವರದಿಯಾಗಿದೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಗ್ರಾಮ ವನ್ ಕೇಂದ್ರದಲ್ಲಿ ಎಸ್ ಡಿಎ ಅಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಸುಚಿತ್ರಾ(31) ಸಾವಿಗೆ ಶರಣಾದವರಾಗಿದ್ದಾರೆ.

ಹಾಸನ ನಗರದ ರಕ್ಷಣಾಪುರಂನಲ್ಲಿರುವ ತಮ್ಮ ನಿವಾಸದಲ್ಲಿ ಸುಚಿತ್ರಾ ಅವರು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಸುಚಿತ್ರಾ ಅವರ ಪತಿ ಇತ್ತೀಚೆಗೆ ನಿಧನರಾಗಿದ್ದರು. ಹೀಗಾಗಿ ಅವರ ಹುದ್ದೆಯನ್ನು ಸುಚಿತ್ರಾ ಅವರಿಗೆ ನೀಡಲಾಗಿತ್ತು.

ಇದೀಗ ಅವರು ತಮ್ಮ ಜೀವನವನ್ನೇ ಕೊನೆಗಾಣಿಸಿದ್ದಾರೆ. ಈ ಘಟನೆ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇತ್ತೀಚಿನ ಸುದ್ದಿ