ಕ್ರೀಡಾಕೂಟದಲ್ಲಿ ಸೋಲನುಭವಿಸಿದ್ದಕ್ಕೆ ನೊಂದು ವಿದ್ಯಾರ್ಥಿನಿ ಸಾವಿಗೆ ಶರಣು! - Mahanayaka

ಕ್ರೀಡಾಕೂಟದಲ್ಲಿ ಸೋಲನುಭವಿಸಿದ್ದಕ್ಕೆ ನೊಂದು ವಿದ್ಯಾರ್ಥಿನಿ ಸಾವಿಗೆ ಶರಣು!

nisha bm
26/11/2023


Provided by

ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ್ದಕ್ಕೆ ನೊಂದು ಖಿನ್ನತೆಗೊಳಗಾದ ವಿದ್ಯಾರ್ಥಿನಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ನಿಶಾ ಮೃತ ಯುವತಿ.

ನಿಶಾ ಬಿ ಎಮ್ ರವರು ಪುತ್ತೂರು ನಗರರ ಖಾಸಗಿ ಕಾಲೇಜಿನ ಪ್ರಥಮ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಕಳೆದ ಎರಡು ವಾರಗಳ ಹಿಂದೆ ಬಿಹಾರದಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ನಿಶಾ ರನ್ನಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಆದರೆ ರನ್ನಿಂಗ್ ರೇಸ್ ನಲ್ಲಿ ಬಹುಮಾನ ಸಿಗದಿದ್ದಕ್ಕೆ ಬೇಸರಗೊಂಡಿದ್ದ ನಿಶಾ ಬಳಿಕ ಖಿನ್ನತೆಗೊಳಗಾಗಿ ತೋಟಕ್ಕೆ ಸಿಂಪಡಿಸುವ ಕೀಟನಾಶವನ್ನ ಸೇವಿಸಿದ್ದಾಳೆ.

ಬಳಿಕ ತೀವ್ರ ವಾಂತಿ ಬಂದ ಕಾರಣಕ್ಕೆ ಮನೆಯವರು ವಿಚಾರಿಸಿದಾಗ ಕೀಟನಾಶಕ ಸೇವಿಸಿದ ವಿಚಾರ ಬೆಳಕಿಗೆ ಬಂದಿದೆ. ಕೂಡಲೇ ಆಕೆಯನ್ನು ಮನೆಯವರು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಪುತ್ತೂರಿನಿಂದ ಮಂಗಳೂರಿಗೆ ಕೊಂಡೊಯ್ಯುವಂತೆ ವೈದ್ಯರು ತಿಳಿಸಿದ್ದರು.

ಅದರಂತೆ ಕಳೆದ ಒಂದು ವಾರದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಿಶಾ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ