ಸೋಲಿನ ಸುಳಿ: ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕಮಲ್ ನಾಥ್ ರಾಜೀನಾಮೆಗೆ ಸೂಚನೆ - Mahanayaka
10:10 PM Wednesday 20 - August 2025

ಸೋಲಿನ ಸುಳಿ: ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕಮಲ್ ನಾಥ್ ರಾಜೀನಾಮೆಗೆ ಸೂಚನೆ

05/12/2023


Provided by

ಇತ್ತೀಚೆಗೆ ಮುಕ್ತಾಯಗೊಂಡ ರಾಜ್ಯ ಚುನಾವಣೆಯಲ್ಲಿ ಪಕ್ಷದ ಭಾರಿ ಸೋಲಿನ ನಂತರ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರನ್ನು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕೇಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಅವರ ರಾಜೀನಾಮೆಯನ್ನು ಹಸ್ತಾಂತರಿಸುವಂತೆ ಪಕ್ಷದ ಹೈಕಮಾಂಡ್ ಅವರನ್ನು ಕೇಳಿದೆ ಎಂದು ಮೂಲಗಳು ತಿಳಿಸಿವೆ.

ಚುನಾವಣೋತ್ತರ ಸಮೀಕ್ಷೆಗಳು ತೀವ್ರ ಸ್ಪರ್ಧೆಯನ್ನು ಊಹಿಸಿದ್ದರೂ ಮಧ್ಯಪ್ರದೇಶದಲ್ಲಿ ಬಿಜೆಪಿ ಭಾರಿ ಗೆಲುವು ಸಾಧಿಸಿದೆ.
ಕಾಂಗ್ರೆಸ್ ಹಿರಿಯ ನಾಯಕ ಜ್ಯೋತಿರಾಧ್ಯ ಸಿಂಧಿಯಾ ಅವರು ಬಂಡಾಯ ತೋರಿಸಿ ತಮ್ಮ ನಿಷ್ಠಾವಂತ ಶಾಸಕರೊಂದಿಗೆ ಬಿಜೆಪಿಗೆ ಸೇರಿದ ನಂತರ 2020 ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿಯಿಂದ ರಾಜ್ಯವನ್ನು ಕಸಿದುಕೊಳ್ಳುವುದಾಗಿ ಕಾಂಗ್ರೆಸ್ ಕೂಡ ವಿಶ್ವಾಸ ಹೊಂದಿತ್ತು.

2023 ರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಭಾನುವಾರ ಪ್ರಾರಂಭವಾಗುವ ಸ್ವಲ್ಪ ಮೊದಲು ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಕಮಲ್ ನಾಥ್ ಅವರನ್ನು ಅಭಿನಂದಿಸುವ ಪೋಸ್ಟರ್ ಗಳು ಭೋಪಾಲ್ ನ ಪಕ್ಷದ ಕಚೇರಿಯ ಹೊರಗೆ ಕಾಣಿಸಿಕೊಂಡಿದ್ದವು.
“ಮುಖ್ಯಮಂತ್ರಿಯಾದ ಗೌರವಾನ್ವಿತ ಕಮಲ್ ನಾಥ್ ಅವರಿಗೆ ಅಭಿನಂದನೆಗಳು” ಎಂದು ಪೋಸ್ಟರ್ ಗಳಲ್ಲಿ ಬರೆಯಲಾಗಿತ್ತು. ಮತ ಎಣಿಕೆಗೆ ಮುಂಚಿತವಾಗಿ ಪಕ್ಷದ ಹಿರಿಯ ನಾಯಕರು ಎಕ್ಸ್ ನಲ್ಲಿ ಅಭಿನಂದನಾ ಟ್ವೀಟ್ ಗಳನ್ನು ಪೋಸ್ಟ್ ಮಾಡಿದ್ದರು.

ಮತಎಣಿಕೆಯ ಅಂತ್ಯದ ವೇಳೆಗೆ ಕಾಂಗ್ರೆಸ್ ಪಕ್ಷವು ದಿಗ್ಭ್ರಮೆಗೊಂಡಿತು. ಭಾರತದ ಚುನಾವಣಾ ಆಯೋಗವು ಬಿಡುಗಡೆ ಮಾಡಿದ ಅಂಕಿಅಂಶಗಳಲ್ಲಿ ಬಿಜೆಪಿ 163 ಸ್ಥಾನಗಳನ್ನು ಗೆದ್ದಿತು. ಇದು ಕಾಂಗ್ರೆಸ್ ಗೆ ತೀವ್ರ ಮುಖಭಂಗ ಉಂಟು‌ಮಾಡಿತ್ತು.

ಇತ್ತೀಚಿನ ಸುದ್ದಿ