ನೆಚ್ಚಿನ ತೋಟದಲ್ಲೇ ಸಕಲ ಸರ್ಕಾರಿ ಗೌರವಗಳೊಂದಿಗೆ ಲೀಲಾವತಿಯವರ ಅಂತ್ಯಕ್ರಿಯೆ

09/12/2023
ಬೆಂಗಳೂರು: ಹಲವು ಸಮಯಗಳಿಂದಲೂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ನಿನ್ನೆ ಕೊನೆಯುಸಿರೆಳೆದಿದ್ದರು. ಇದೀಗ ಗಣ್ಯರ ಸಮ್ಮುಖದಲ್ಲಿ ಅವರ ಅಂತ್ಯಕ್ರಿಯೆ ನೆರವೇರಿದೆ.
ಅಂತ್ಯಕ್ರಿಯೆಗೂ ಮುನ್ನ, ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ನಟ ದರ್ಶನ್, ಶಿವರಾಜ್ ಕುಮಾರ್, ಅನಂತ್ ನಾಗ್, ಉಪೇಂದ್ರ ಸೇರಿದಂತೆ ಚಿತ್ರರಂಗ ಹಾಗೂ ನಾನಾ ಕ್ಷೇತ್ರಗಳ ಗಣ್ಯರು ಅಂತಿಮ ದರ್ಶನ ಪಡೆದುಕೊಂಡರು.
ಸಕಲ ಸರ್ಕಾರಿ ಗೌರವಗಳೊಂದಿಗೆ ಹಿಂದೂ ಧರ್ಮದ ವಿಧಿ ವಿಧಾನಗಳ ಪ್ರಕಾರ ನೆಲಮಂಗಲ ಸಮೀಪದ ಸೋಲದೇವನಹಳ್ಳಿ ತೋಟದ ಮನೆಯಲ್ಲಿ ಲೀಲಾವತಿ ಅವರ ಅಂತ್ಯಕ್ರಿಯೆ ನಡೆಯಿತು. ಪುತ್ರ ವಿನೋದ್ ರಾಜ್ ಅಂತಿಮ ವಿಧಿವಿಧಾನಗಳನ್ನು ನಡೆಸಿದರು.