ಮೀಸಲಾತಿಯ ವಾಸ್ತವಾಂಶವೇ ಸರ್ಕಾರಕ್ಕೆ ಗೊತ್ತಿಲ್ಲ, ಮುಗ್ಧ ಸ್ವಾಮೀಜಿಗಳನ್ನು ಬಿಸಿಲಿನಲ್ಲಿ ನಡೆಸುತ್ತಿದ್ದಾರೆ | ಕುಮಾರಸ್ವಾಮಿ - Mahanayaka

ಮೀಸಲಾತಿಯ ವಾಸ್ತವಾಂಶವೇ ಸರ್ಕಾರಕ್ಕೆ ಗೊತ್ತಿಲ್ಲ, ಮುಗ್ಧ ಸ್ವಾಮೀಜಿಗಳನ್ನು ಬಿಸಿಲಿನಲ್ಲಿ ನಡೆಸುತ್ತಿದ್ದಾರೆ | ಕುಮಾರಸ್ವಾಮಿ

15/02/2021


Provided by

ಶಿವಮೊಗ್ಗ: ಮೀಸಲಾತಿಯ ವಾಸ್ತವಾಂಶ ಅಧಿಕಾರದಲ್ಲಿ ಇರುವ ಸರ್ಕಾರಕ್ಕೇ ಅರ್ಥವಾಗಿಲ್ಲ, ಅಂಬೇಡ್ಕರ್ ಅವರು,  ತಲತಲಾಂತದಿಂದ ಅಪಮಾನ, ತುಳಿತಕ್ಕೆ ಒಳಗಾದವರಿಗೆ, ಅವರು ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದವರಿಗೆ ನೆರವಾಗಲು ಮೀಸಲಾತಿ ಬೇಕೆಂದರು, ಆದರೆ ಇಂದು ಈ ವಿಚಾರವನ್ನು ಬೀದಿಗೆ ತರಲಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮೀಸಲಾತಿ ಬೇಡಿಕೆ ಹೋರಾಟಗಳು ಭವಿಷ್ಯದಲ್ಲಿ ಜಾತಿಗಳ ಮಧ್ಯೆ ಸಂಘರ್ಷಕ್ಕೆ ದಾರಿಯಾಗಬಹುದು ಎಂದ ಅವರು, ಇಂದು ಸರ್ಕಾರದ ಸಚಿವರು, ಶಾಸಕರೇ ತಮ್ಮ ಜಾತಿಗಳ ಪರ ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ.  ಸಂಪುಟ ಸಭೆಯಲ್ಲೇ ನಿರ್ಧರಿಸಬಹುದಾದ ವಿಷಯವನ್ನು ಬೀದಿಗೆ ತಂದು, ಮುಗ್ಧ ಸ್ವಾಮೀಜಿಗಳನ್ನೂ ಬಿಸಿಲಲ್ಲಿ ನೂರಾರು ಕಿ.ಮೀ ನಡೆಸುತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

ಈ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಗೊಂದಲದ ಹೇಳಿಕೆಗಳನ್ನು ನೀಡುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ. ಇಂತಹ ವಿಚಾರಗಳು ಸದನದಲ್ಲಿ ಗಂಭೀರ ಚರ್ಚೆಯಾಗುವುದಿಲ್ಲ ಎಂದು ಕುಮಾರಸ್ವಾಮಿ  ಅಸಮಾಧಾನ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ