ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿಯ ಮಾಸಿಕ ಸಭೆ

19/12/2023
ವಿಟ್ಲ : ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿ (ರಿ). ವಿಟ್ಲ ಇದರ ಡಿಸೆಂಬರ್ ತಿಂಗಳ ಮಾಸಿಕ ಸಭೆಯು ಡಿ.17ರಂದು ಅಧ್ಯಾಪಕರ ಸಭಾಭವನದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಸೋಮಪ್ಪ ನಾಯ್ಕ ಮಲ್ಯ ವಹಿಸಿದ್ದರು. ಸಭೆಯಲ್ಲಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಇದರ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್. ಬೆಳ್ತಂಗಡಿ ಹಾಗೂ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾದ ಬಿ.ಕೆ. ವಸಂತ್, ತಾಲೂಕು ಸಂಘಟನಾ ಸಂಚಾಲಕರಾದ ಪ್ರಭಾಕರ ಬೆಳ್ತಂಗಡಿ ಉಪಯುಕ್ತ ಮಾಹಿತಿ ನೀಡಿದರು.
ದಲಿತ್ ಸೇವಾ ಸಮಿತಿಯ ಸ್ಥಾಪಕಧ್ಯಕ್ಷರು ಬಿ.ಕೆ. ಸೇಸಪ್ಪ ಬೆದ್ರಕಾಡು ಹಾಗೂ ಇತರ ದಲಿತ್ ಸೇವಾ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.