ಮಹಿಳೆಯರ ಬಗ್ಗೆ ಅವಹೇಳನಾಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೂರು
26/12/2023
ದಕ್ಷಿಣ ಕನ್ನಡ: ಮಹಿಳೆಯರನ್ನು ತುಚ್ಚವಾಗಿ ಅವಮಾನಿಸಿದ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ WIM ನಿಂದ ದೂರು ದಾಖಲಿಸಲಾಗಿದೆ.
ಮಂಡ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದ್ದೇಶಪೂರ್ವಕವಾಗಿ ಮಹಿಳೆಯರನ್ನು ಅತ್ಯಂತ ಕೀಳಾಗಿ ಅವಮಾನಿಸಿ ಮತ್ತು ವಿಚ್ಚೇದಿತ ಮಹಿಳೆಯರಿಗೆ ಕಳಂಕ ಹಚ್ಚುವ ಹಾಗೂ ಮುಸಲ್ಮಾನರ ಧಾರ್ಮಿಕ ಭಾವನೆಗಳಿಗೆ ಕುಂದುಂಟು ಮಾಡುವ ಜೊತೆಗೆ ಅಸಭ್ಯ ಭಾಷೆಯಲ್ಲಿ ಮಹಿಳೆಯರ ಲೈಂಗಿಕ ಜೀವನ ಮತ್ತು ಕೌಟುಂಬಿಕ ಜೀವನವನ್ನು ಕೀಳಾಗಿ ಬಿಂಬಿಸಿದ ಹಾಗು ಮುಸ್ಲಿಂ ಮಹಿಳೆಯರ ಹಕ್ಕುಗಳಿಗೆ ಚ್ಯುತಿ ತರುವಂತಹ ಮಾತುಗಳನ್ನು ಆಡಿರುವ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ WIM ಬಂಟ್ವಾಳ ಕ್ಷೇತ್ರ ಕಾರ್ಯದರ್ಶಿ ಶಮೀಮ ರವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ಸಂದರ್ಭದಲ್ಲಿ WIM ಜಿಲ್ಲಾಧ್ಯಕ್ಷರಾದ ನೌರಿನ್ ಆಲಂಪಾಡಿ, WIM ಜಿಲ್ಲಾ ಉಪಾಧ್ಯಕ್ಷರಾದ ಝಹನಾ ಬಂಟ್ವಾಳ ಜೊತೆಗಿದ್ದರು.




























