ಪತ್ನಿ ಮಾಡ್ರನ್ ಡ್ರೆಸ್ ಧರಿಸುತ್ತಾಳೆಂದು ಚಾಕುವಿನಿಂದ ಇರಿದು ಬರ್ಬರ ಹತ್ಯೆ!

31/12/2023
ಹಾಸನ: ಪತ್ನಿ ಮಾಡ್ರನ್ ಬಟ್ಟೆ ಧರಿಸುತ್ತಾಳೆ ಎಂದು ಸೈಕೋ ಪತಿಯೋರ್ವ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ.
ಹುಬ್ಬಳ್ಳಿ ಮೂಲದ ಜ್ಯೋತಿ (22) ಕೊಲೆಯಾದ ಮಹಿಳೆಯಾಗಿದ್ದು, ರಾಂಪುರ ಗ್ರಾಮದ ನಿವಾಸಿ ಜೀವನ್ (25) ಪತ್ನಿ ಕೊಲೆಗೈದ ಆರೋಪಿಯಾಗಿದ್ದಾನೆ.
ಗಾರ್ಮೆಂಟ್ಸ್ ನಲ್ಲಿ ಜೊತೆಯಾಗಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಪರಸ್ಪರ ಪ್ರೀತಿಸಿ ಇವರಿಬ್ಬರು ವಿವಾಹವಾಗಿದ್ದರು. ಪತ್ನಿ ಮಾಡ್ರನ್ ಡ್ರೆಸ್ ಹಾಕ್ತಾ ಇದ್ದಾಳೆ ಎನ್ನುವ ವಿಚಾರಕ್ಕೆ ಇವರಿಬ್ಬರ ನಡುವೆ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ಶನಿವಾರ ಕೂಡ ಇವರ ನಡುವೆ ಗಲಾಟೆ ನಡೆದಿತ್ತು. ಗಲಾಟೆಯ ಬಳಿಕ ಬೈಕ್ ನಲ್ಲಿ ಡ್ರಾಪ್ ಕೊಡುವುದಾಗಿ ಅರಣ್ಯ ಪ್ರದೇಶಕ್ಕೆ ಕರೆದೊಯ್ದ ಪತಿ ಪತ್ನಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.
ಸದ್ಯ ಘಟನೆ ಸಂಬಂಧ ಅರಸೀಕೆರೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.