ಬಾಂಗ್ಲಾದೇಶ ಚುನಾವಣೆಯಲ್ಲಿ ಮತ್ತೊಮ್ಮೆ ಭರ್ಜರಿ ಗೆಲುವು ದಾಖಲಿಸಿದ ಶೇಖ್ ಹಸೀನಾ - Mahanayaka

ಬಾಂಗ್ಲಾದೇಶ ಚುನಾವಣೆಯಲ್ಲಿ ಮತ್ತೊಮ್ಮೆ ಭರ್ಜರಿ ಗೆಲುವು ದಾಖಲಿಸಿದ ಶೇಖ್ ಹಸೀನಾ

sheikh hasina
08/01/2024


Provided by

ಬಾಂಗ್ಲಾದೇಶದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಧಾನಿ ಮತ್ತು ಅವಾಮಿ ಲೀಗ್ ಮುಖ್ಯಸ್ಥೆಯಾದ ಶೇಖ್ ಹಸೀನಾ ಗೆಲುವು ಸಾಧಿಸಿದ್ದಾರೆ.

76 ವರ್ಷದ ಶೇಖ್ ಹಸೀನಾ 249,965 ಮತಗಳನ್ನು ಪಡೆದುಕೊಂಡಿದ್ದು, ಅವರ ಪ್ರತಿಸ್ಪರ್ಧಿ ಮತ್ತು ಬಾಂಗ್ಲಾದೇಶ ಸುಪ್ರೀಂ ಪಾರ್ಟಿಯ ಎಂ.ನಿಜಾಮ್ ಉದ್ದೀನ್ ಲಷ್ಕರ್ ಕೇವಲ 469 ಮತಗಳನ್ನು ಪಡೆದಿದ್ದಾರೆ.

ಗೋಪಾಲಗಂಜ್ ಡೆಪ್ಯುಟಿ ಕಮಿಷನರ್ ಮತ್ತು ಚುನಾವಣಾ ಅಧಿಕಾರಿ ಖಾಜಿ ಮಹಬೂಬೂಲ್ ಆಲಂ ಈ ಫಲಿತಾಂಶವನ್ನು ಪ್ರಕಟಿಸಿದರು.

ಶೇಖ್ ಹಸೀನಾ ಅವರು 1986 ರಿಂದ ಎಂಟು ಬಾರಿ ಗೋಪಾಲಗಂಜ್-3 ಸ್ಥಾನವನ್ನು ಗೆದ್ದಿದ್ದಾರೆ. ಪ್ರಧಾನಿ ಹಸೀನಾ ಅವರು ಸತತ ನಾಲ್ಕನೇ ಅವಧಿಗೆ ಅಧಿಕಾರ ಹಿಡಿಯಲಿದ್ದಾರೆ.

ಇತ್ತೀಚಿನ ಸುದ್ದಿ