ಅಯೋಧ್ಯೆ ರಾಮಮಂದಿರ ಟ್ರಸ್ಟ್ ನೀಡಿರುವ ಆಹ್ವಾನವನ್ನು ಕಾಂಗ್ರೆಸ್ ತಿರಸ್ಕರಿಸಿದ್ದೇಕೆ?

ನವದೆಹಲಿ: ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮವನ್ನು ಬಿಜೆಪಿ ಹಾಗೂ ಆರೆಸ್ಸೆಸ್ ರಾಜಕೀಯ ಲಾಭಕ್ಕಾಗಿ ಬಳಸುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಈ ಕಾರ್ಯಕ್ರಮದಲ್ಲಿ ಭಾಗಿಯಾಗದೇ ಇರಲು ನಿರ್ಧಾರ ಪ್ರಕಟಿಸಿದೆ.
ಕಾಂಗ್ರೆಸ್ ಮುಖ್ಯ ವಕ್ತಾರ ಜೈರಾಮ್ ರಮೇಶ್ ಅವರು ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿದ್ದು, ಅಯೋಧ್ಯೆ ರಾಮಮಂದಿರ ಟ್ರಸ್ಟ್ ನೀಡಿರುವ ಆಹ್ವಾನವನ್ನು ಗೌರವಪೂರ್ವಕವಾಗಿ ನಿರಾಕರಿಸಿದೆ.
ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರು ಭಾಗಿಯಾಗದೇ ಇರಲು ನಿರ್ಧಾರ ಮಾಡಿದ್ದಾರೆ. ಅಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಅಧೀರ್ ರಂಜನ್ ಚೌಧರಿ ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ ಎಂದು ತಿಳಿಸಿದ್ದಾರೆ.
ರಾಮಮಂದಿರ ಉದ್ಘಾಟನೆಯನ್ನು ಚುನಾವಣಾ ಲಾಭಕ್ಕಾಗಿ ಮುಂಚೂಣಿಗೆ ತಂದಿದ್ದಾರೆ. ಆರ್ ಎಸ್ ಎಸ್ ಹಾಗೂ ಬಿಜೆಪಿ ಈ ಕಾರ್ಯಕ್ರಮವನ್ನು ರಾಜಕೀಯ ಲಾಭದ ಕಾರ್ಯಕ್ರಮವಾಗಿ ಮಾಡಿದೆ. ಅಪೂರ್ಣ ದೇವಾಲ ಉದ್ಘಾಟನೆಯನ್ನು ಚುನಾವಣಾ ಲಾಭಕ್ಕಾಗಿ ಮುಂಚೂಣಿಗೆ ತರಲಾಗಿದೆ. ಹೀಗಾಗಿ ಅಯೋಧ್ಯೆ ಟ್ರಸ್ಟ್ ಆಹ್ವಾನವನ್ನು ತಿರಸ್ಕರಿಸಲಾಗಿದೆ ಎಂದು ಹೇಳಲಾಗಿದೆ.