8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ - Mahanayaka
10:55 AM Thursday 21 - August 2025

8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

arest
19/01/2024


Provided by

ಬೆಳ್ತಂಗಡಿ: ನ್ಯಾಯಾಲಯದಿಂದ ಜಾಮೀನು ಪಡೆದು, ಬಳಿಕ ನ್ಯಾಯಾಲಯಕ್ಕೆ ಹಾಜರಾಗದೇ ಕಳೆದ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

ಹಾಸನ ಜಿಲ್ಲೆಯ ಹೊಳೆನರಸೀಪುರ ನಿವಾಸಿ ವಾಜಿದ್ ಪಾಷಾ(54) ಬಂಧಿತ ಆರೋಪಿಯಾಗಿದ್ದಾನೆ. ಈತ ಅಕ್ರಮ ಗೋಸಾಗಾಟ ಪ್ರಕರಣದಲ್ಲಿ ಬಂಧಿತನಾಗಿದ್ದು, ಬಳಿಕ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡಿದ್ದ ಆ ಬಳಿಕ ತಲೆಮರೆಸಿಕೊಂಡಿದ್ದ.

ತಲೆಮರೆಸಿಕೊಂಡಿದ್ದ ಆರೋಪಿ ವಾಜಿದ್ ನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದು, ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಇತ್ತೀಚಿನ ಸುದ್ದಿ