ಅಹಿಂದ ಸಮಾವೇಶಕ್ಕೆ ಗ್ರೀನ್ ಸಿಗ್ನಲ್ ನೀಡಿದ ರಾಹುಲ್ ಗಾಂಧಿ? - Mahanayaka

ಅಹಿಂದ ಸಮಾವೇಶಕ್ಕೆ ಗ್ರೀನ್ ಸಿಗ್ನಲ್ ನೀಡಿದ ರಾಹುಲ್ ಗಾಂಧಿ?

16/02/2021

ನವದೆಹಲಿ: ಮಾಜಿ ಸಿಎಂ ಸಿದ್ದರಾಮಯ್ಯಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದು, ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಇದೇ ಸಂದರ್ಭದಲ್ಲಿ ಅಹಿಂದ ಸಮಾವೇಶ ನಡೆಸಲು ಅವರು ರಾಹುಲ್ ಗಾಂಧಿ ಅವರಿಂದ ಸಿದ್ದರಾಮಯ್ಯ ಅನುಮತಿ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.


Provided by

ರಾಜ್ಯ ರಾಜಕೀಯ ವಿದ್ಯಮಾನಗಳು ಹಾಗೂ ಅಹಿಂದ ಸಮಾವೇಶದ ಕುರಿತಾಗಿ ತಮ್ಮ ನಿರ್ಧಾರಗಳ ಬಗ್ಗೆ ತಿಳಿಸಿದ್ದು, ಮೀಸಲಾತಿ ವಿಚಾರದಲ್ಲಿ ಬಿಜೆಪಿಯಿಂದ ತಮ್ಮ ವಿರುದ್ಧ ಕುರುಬ ಸಮುದಾಯವನ್ನು ಎತ್ತಿಕಟ್ಟುವ ತಂತ್ರ ಹೆಣೆಯಲಾಗಿದೆ. ಇದಕ್ಕೆ ಪ್ರತಿ ತಂತ್ರವಾಗಿ ಅಹಿಂದ ಸಮಾವೇಶ ನಡೆಸುವ ಬಗ್ಗೆ ರಾಹುಲ್ ಗಾಂಧಿ ಬಳಿ ಸಿದ್ದರಾಮಯ್ಯ ಪ್ರಸ್ತಾಪಿಸಿದ್ದಾರೆ ಎಂದು ಹೇಳಲಾಗಿದೆ.

ಪಕ್ಷಕ್ಕೆ ಒಳಿತಾಗುವ ಯಾವುದೇ ಸಮಾವೇಶ ನಡೆಸಲು ಅನುಮತಿ ಇರುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಅಹಿಂದ ಸಮಾವೇಶಕ್ಕೆ ಸಿದ್ದರಾಮಯ್ಯ ವೇದಿಕೆ ಸಜ್ಜು ಮಾಡಲಿದ್ದಾರೆ ಎಂದು ವಿವಿಧ ಮಾಧ್ಯಮಗಳು ವರದಿಯಾಗಿದೆ. ಆದರೆ ಈ ಬಗ್ಗೆ ಯಾವುದೇ ಮಾಧ್ಯಮಗಳಿಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ಇತ್ತೀಚಿನ ಸುದ್ದಿ