ಕಾಂಗ್ರೆಸ್ ಪಕ್ಷದಲ್ಲಿ ಜಗದೀಶ್ ಶೆಟ್ಟರ್ ಅವರಿಗೆ ಯಾವುದೇ ಅನ್ಯಾಯವಾಗಿಲ್ಲ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

25/01/2024
ಕೊಡಗು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ವಿಚಾರವಾಗಿ ಕೊಡಗು ಜಿಲ್ಲೆಯ ವೀರಾಜಪೇಟೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಜಗದೀಶ್ ಶೆಟ್ಟರ್ ಅವರಿಗೆ ಯಾವುದೇ ಅನ್ಯಾಯವಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ನಾವು ಅವರಿಗೆ ಟಿಕೆಟ್ ಕೊಟ್ಟಿದ್ದೆವು. ಚುನಾವಣೆಯಲ್ಲಿ ಅವರು ಸೋತರೂ ಎಂಎಲ್ ಸಿ ಮಾಡಿದೆವು. ಕಾಂಗ್ರೆಸ್ ಪಕ್ಷದಲ್ಲಿ ಅವರಿಗೆ ಯಾವುದೇ ಅನ್ಯಾಯವಾಗಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
ಒಮ್ಮೆ ಅವರು ಬಿಜೆಪಿಯಲ್ಲಿ ಅವಮಾನ ಆಗಿದೆ, ಮತ್ತೆ ಹೋಗಲ್ಲ ಎಂದಿದ್ದರು ಎಂದು ಇದೇ ವೇಳೆ ಜಗದೀಶ್ ಶೆಟ್ಟರ್ ಅವರು ಈ ಹಿಂದೆ ಆಡಿದ್ದ ಮಾತುಗಳನ್ನು ಸಿದ್ದರಾಮಯ್ಯ ನೆನಪಿಸಿಕೊಂಡರು.