ಕುಡಿದು ಬಸ್ ಚಲಾಯಿಸುತ್ತಿದ್ದ 9 ಖಾಸಗಿ ಬಸ್ ಚಾಲಕರ ವಿರುದ್ಧ ಕ್ರಿಮಿನಲ್ ಕೇಸ್! - Mahanayaka

ಕುಡಿದು ಬಸ್ ಚಲಾಯಿಸುತ್ತಿದ್ದ 9 ಖಾಸಗಿ ಬಸ್ ಚಾಲಕರ ವಿರುದ್ಧ ಕ್ರಿಮಿನಲ್ ಕೇಸ್!

f.i .r
27/01/2024


Provided by

ಬೆಂಗಳೂರು: ಕುಡಿದು ಬಸ್ ಚಾಲನೆ ಮಾಡುತ್ತಿದ್ದ 9 ಮಂದಿ ಖಾಸಗಿ ಬಸ್ ಚಾಲಕರ ವಿರುದ್ಧ ನಗರ ಸಂಚಾರ ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಂಗಳೂರು ನಗರ ಸಂಚಾರ ಪೊಲೀಸರು ಗುರುವಾರ ನಗರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ವೇಳೆ ಕುಡಿದು ವಾಹನ ಚಲಾಯಿಸುತ್ತಿರುವ ಪ್ರಕರಣಗಳು ಪತ್ತೆಯಾಗಿವೆ.

ಆನಂದ್ ರಾವ್ ವೃತ್ತ, ಮೌರ್ಯ ವೃತ್ತ, ಕಪಾಲಿ ರಸ್ತೆ, ಗಾಂಧಿ ನಗರ ಸೇರಿದಂತೆ ಖಾಸಗಿ ಬಗ್ ಗಳು ಹೆಚ್ಚಾಗಿ ಓಡಾಡುವ ವಿವಿಧ ಸ್ಥಳಗಳಲ್ಲಿ ನಗರ ಸಂಚಾರ ಪೊಲೀಸರು ಗುರುವಾರ ರಾತ್ರಿ 8 ಗಂಟೆಯಿಂದ 11.30ರವರೆಗೆ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು ಈ ವೇಳೆ 9 ಮಂದಿ ಚಾಲಕರು ಕುಡಿದು ವಾಹನ ಚಲಾಯಿಸಿರುವುದು ಪತ್ತೆಯಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ