2 ಚಿನ್ನದ ಬಿಸ್ಕೆಟ್ ಕದ್ದು ಪರಾರಿಯಾಗುತ್ತಿದ್ದ ಅಪ್ರಾಪ್ತ ಬಾಲಕನ ಬಂಧನ

27/01/2024
ಬೆಂಗಳೂರು: ತಾನು ಕೆಲಸ ಮಾಡುತ್ತಿದ್ದ ವ್ಯಕ್ತಿಯ ಬಳಿಯಿದ್ದ 12.46 ಲಕ್ಷ ರೂಪಾಯಿ ಮೌಲ್ಯದ ಚಿನ್ನದ 2 ಬಿಸ್ಕತ್ ಗಳನ್ನು ಕದ್ದೊಯ್ದ ಅಪ್ರಾಪ್ತ ವಯಸ್ಸಿನ ಬಾಲಕನನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ ಬಂಧಿಸಿದ್ದಾರೆ.
ಚಿನ್ನದ ಬಿಸ್ಕೆಟ್ ಜೊತೆಗೆ ಬೆಂಗಳೂರು ಬಿಟ್ಟು ಹೊರಡಲು ಬಾಲಕ ಪ್ಲಾನ್ ಮಾಡುತ್ತಿದ್ದ ವೇಳೆ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಘಟನೆ ಸಂಬಂಧ ಸಿಐಎಸ್ಎಫ್ ಸಬ್ ಇನ್ಸ್ಪೆಕ್ಟರ್ ದೀಪಕ್ ತನ್ವರ್ ನೀಡಿದ ದೂರಿನ ಮೇರೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಂಜಾನೆ 1.15 ರ ಸುಮಾರಿಗೆ ಭದ್ರತಾ ತಪಾಸಣೆಯ ಸಮಯದಲ್ಲಿ, ಡೋರ್ ಫ್ರೇಮ್ ಮೆಟಲ್ ಡಿಟೆಕ್ಟರ್ ಅಲಾರಾಂ ಹೊಡೆಯಿತು. ಹೀಗಾಗಿ ಬಾಲಕ ಸಿಕ್ಕಿ ಬಿದ್ದಿದ್ದಾನೆ.