ಬಿಜೆಪಿಗೆ ರಿವರ್ಸ್ ಆಪರೇಷನ್ ಬಿಸಿ?: ಸಿದ್ದರಾಮಯ್ಯನವರ ಕಾರಿನಲ್ಲಿ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್!

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದೆ. ಕಳೆದ ವಿಧಾನ ಸಭಾ ಚುನಾವಣೆ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕೆಲವು ದಿನಗಳ ಹಿಂದೆಯಷ್ಟೇ ಬಿಜೆಪಿಗೆ ಮತ್ತೆ ಸೇರ್ಪಡೆಗೊಂಡಿದ್ದಾರೆ. ಇದರ ಬೆನ್ನಲ್ಲೇ ಮತ್ತೊಂದು ಮಹತ್ವದ ಬೆಳವಣಿಗೆಯಾಗಿದೆ.
ಬೆಂಗಳೂರಿನಲ್ಲಿ ಇಂದು ಬಿಜೆಪಿ ಕಾರ್ಯಕಾರಣಿ ಸಭೆ ನಡೆಯುತ್ತಿದ್ದು, ಈ ಸಭೆಗೆ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಗೈರು ಹಾಜರಾಗಿದ್ದಾರೆ. ಮಾತ್ರವಲ್ಲದೇ ಅವರು ಸಿಎಂ ಸಿದ್ದರಾಮಯ್ಯನವರ ಜೊತೆಗೆ ಕಾಣಿಸಿಕೊಂಡಿದ್ದಾರೆ ಎನ್ನುವ ವಿಚಾರ ವ್ಯಾಪಕವಾಗಿ ಚರ್ಚೆಗೀಡಾಗಿದೆ.
ಬೆಂಗಳೂರಿನ ನೈಸ್ ರಸ್ತೆ ಬಳಿ ನಡೆದ ಕಾರ್ಯಕ್ರಮದ ನಂತರ ಸಿಎಂ ಕಾರಿನಲ್ಲೇ ಶಕ್ತಿಭವನದವರೆಗೆ ಎಸ್.ಟಿ.ಸೋಮಶೇಖರ್ ಪ್ರಮಾಣ ಮಾಡಿದ್ದಾರೆ.
ಇನ್ನೂ ಬಿಜೆಪಿ ಕಾರ್ಯಾಕಾರಿಣಿ ಸಭೆಯ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನನಗೆ ಅದರ ಬಗ್ಗೆ ಮಾಹಿತಿ ಇಲ್ಲ, ಆಹ್ವಾನವೂ ಬಂದಿಲ್ಲ ಎಂದರು.ಇನ್ನೂ ಶೆಟ್ಟರ್ ಬಗೆಗಿನ ಪ್ರಶ್ನೆಗೆ ಇದೇ ವೇಳೆ ಉತ್ತರಿಸಿದ ಅವರು, ಅನ್ಯಾಯವಾಗಿದೆ ಅಂತ ಕಾಂಗ್ರೆಸ್ ಗೆ ಹೋಗಿದ್ದರು. ಅವರನ್ನು ಕಾಂಗ್ರೆಸ್ ಎಂಎಲ್ ಸಿ ಮಾಡಿತ್ತು. ಈಗ ಕಾಂಗ್ರೆಸ್ ಬಿಟ್ಟು ಹೋಗಿದ್ದಾರೆ. ನನ್ನದೇನೂ ಪ್ರಶ್ನೆ ಇಲ್ಲ, ನಾನು ಬಿಜೆಪಿಯಲ್ಲೇ ಇದ್ದೀನಿ ಎಂದು ಸ್ಪಷ್ಟಪಡಿಸಿದರು.