ರೈಲ್ವೇ ಹಳಿಯಲ್ಲಿ ಇಬ್ಬರು ಯುವಕರ ಮೃತದೇಹ ಪತ್ತೆ! - Mahanayaka
6:40 PM Wednesday 19 - November 2025

ರೈಲ್ವೇ ಹಳಿಯಲ್ಲಿ ಇಬ್ಬರು ಯುವಕರ ಮೃತದೇಹ ಪತ್ತೆ!

trian track
30/01/2024

ಕಾಸರಗೋಡು: ರೈಲು ಡಿಕ್ಕಿಯಾಗಿ ಇಬ್ಬರು ಯುವಕರು ಮೃತಪಟ್ಟ ಘಟನೆ ಪಳ್ಳಂ ರೈಲ್ವೇ ಸೇತುವೆ ಬಳಿ ಇಂದು ಮುಂಜಾನೆ ನಡೆದಿದೆ.

ಇಂದು ಮುಂಜಾನೆ ಸುಮಾರು 5:30ರ ಸುಮಾರಿಗೆ ಇಬ್ಬರು ಯುವಕರ ಮೃತದೇಹ ಹಳಿಯಲ್ಲಿ ಪತ್ತೆಯಾಗಿದೆ. ಸ್ಥಳೀಯರು ನೀಡಿದ ಮಾಹಿತಿಯನ್ವಯ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಮೃತ ಯುವಕರು 20ರಿಂದ 25 ವರ್ಷ ವಯಸ್ಸಿನವರು ಎಂದು ತಿಳಿದು ಬಂದಿದೆ. ಈವರೆಗೆ ಮೃತರ ಗುರುತು ಪತ್ತೆಯಾಗಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ