ರಾಘವೇಂದ್ರ ರಾಜ್ ಕುಮಾರ್ ಅವರಿಗೆ ಹೃದಯ ಸಂಬಂಧಿ ಶಸ್ತ್ರ ಚಿಕಿತ್ಸೆಗೆ ಸಿದ್ಧತೆ - Mahanayaka
11:20 PM Wednesday 15 - October 2025

ರಾಘವೇಂದ್ರ ರಾಜ್ ಕುಮಾರ್ ಅವರಿಗೆ ಹೃದಯ ಸಂಬಂಧಿ ಶಸ್ತ್ರ ಚಿಕಿತ್ಸೆಗೆ ಸಿದ್ಧತೆ

17/02/2021

ಬೆಂಗಳೂರು: ನಟ ರಾಘವೇಂದ್ರ ರಾಜ್ ಕುಮಾರ್ ಅವರು ನಿನ್ನೆ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಯಶವಂತಪುರ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


Provided by

ಚಿತ್ರೀಕರಣದ ವೇಳೆ ಸುಸ್ತು ಆವರಿಸಿದ್ದು, ಇದರಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾದೆ ಎಂದು ಅವರ ಪುತ್ರ ವಿನಯ್ ರಾಜ್ ಕುಮಾರ್ ನಿನ್ನೆ ಪ್ರತಿಕ್ರಿಯಿಸಿದ್ದರು.

ಬೆಳಕು ಚಿತ್ರದ ಶೂಟಿಂಗ್ ವೇಳೆ ರಾಘವೇಂದ್ರ ರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು.  ನಿನ್ನೆ 6 ಗಂಟೆಯ ವೇಳೆಗೆ ತಪಾಸಣೆಗೆಂದು ಬಂದಿದ್ದ ರಾಘವೇಂದ್ರ ರಾಜ್ ಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಾಹಿತಿಗಳ ಪ್ರಕಾರ ರಾಘವೇಂದ್ರ ರಾಜ್ ಕುಮಾರ್ ಅವರಿಗೆ ಹೃದಯ ಸಂಬಂಧಿ ಶಸ್ತ್ರ ಚಿಕಿತ್ಸೆ ಮಾಡಲು ಸಿದ್ಧತೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ರಾಘವೇಂದ್ರ ರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಸದ್ಯ ಆತಂಕ ಪಡುವಂತಹದ್ದೇನಿಲ್ಲ ಎಂದು ಹೇಳಲಾಗಿದೆ. ಆಸ್ಪತ್ರೆಗೆ ಸಹೋದರರಾದ ಶಿವರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಭೇಟಿ ನೀಡಿದ್ದಾರೆ.

ಈ ಹಿಂದೆ 2013ರಲ್ಲಿ ರಾಘವೇಂದ್ರ ರಾಜ್ ಕುಮಾರ್ ಅವರಿಗೆ ಮೆದುಳು ಸಂಬಂಧಿ ಸಮಸ್ಯೆಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ಇದೀಗ ಹೃದಯ ಸಂಬಂಧಿ ಶಸ್ತ್ರ ಚಿಕಿತ್ಸೆ ಮಾಡಲು ಸಿದ್ಧತೆ ನಡೆಸಲಾಗಿದೆ.

ಇತ್ತೀಚಿನ ಸುದ್ದಿ