ಪೂನಂ ಪಾಂಡೆ ಜೀವಂತವಾಗಿದ್ದಾರೆ..! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಸಾವನ್ನಪ್ಪಿದ್ದೇನೆ ಎಂದಿದ್ರಂತೆ ನಟಿ..!

ನಿನ್ನೆಯಷ್ಟೇ ಬಾಲಿವುಡ್ ನಟಿ ಪೂನಾಂ ಪಾಂಡೆ ಸಾವನ್ನಪ್ಪಿದ್ರು ಎಂಬ ಸುದ್ದಿ ಬಹಳಷ್ಟು ವೈರಲ್ ಆಗಿತ್ತು. ಇದೀಗ ಈ ವಿಚಾರ ಫೇಕ್ ಎಂಬುದು ಬಯಲಾಗಿದೆ. ಈಗಲೂ ಜನರು ಪೂನಂ ಪಾಂಡೆಯ ಸಾವನ್ನು ನಿಜವೆಂದು ನಂಬಿದ್ದಾರೆ. ಆದರೆ ಈ ವೈರಲ್ ಸುದ್ದಿ ಮಧ್ಯೆ ಈಕೆ ವೀಡಿಯೋ ಮೂಲಕ ಮಾತನಾಡಿದ್ದು ತಾನು ಬದುಕಿದ್ದೀನಿ ಎಂದಿದ್ದಾರೆ. ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವುದು ತನ್ನ ಉದ್ದೇಶ ಎಂದು ಹೇಳಿಕೊಂಡಿದ್ದಾರೆ.
“ನಾನು ಜೀವಂತವಾಗಿದ್ದೇನೆ” ಎಂದು ಪೂನಂ ಪಾಂಡೆ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ತಾನು ಸ್ಟಂಟ್ ಮಾಡಿದ್ದೇನೆ ಎಂದು ನಟಿ ಹೇಳಿಕೊಂಡಿದ್ದಾರೆ.
ಈ ಬಗ್ಗೆ ಇನ್ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿರುವ ಪೂನಂ, “ನಿಮ್ಮೆಲ್ಲರೊಂದಿಗೆ ಮಹತ್ವದ ಸಂಗತಿಯನ್ನು ಹಂಚಿಕೊಳ್ಳಲು ನಾನು ಬಂದಿದ್ದೇನೆ. ನಾನು ಇಲ್ಲಿದ್ದೇನೆ, ಜೀವಂತವಾಗಿದ್ದೇನೆ. ಗರ್ಭಕಂಠದ ಕ್ಯಾನ್ಸರ್ ನನ್ನನ್ನು ಬಲಿ ತೆಗೆದುಕೊಳ್ಳಲಿಲ್ಲ.
ಆದರೆ ದುರಂತವೆಂದರೆ, ಈ ರೋಗವನ್ನು ಹೇಗೆ ನಿಭಾಯಿಸುವುದು ಎಂಬುದರ ಬಗ್ಗೆ ಜ್ಞಾನದ ಕೊರತೆಯಿಂದ ಉಂಟಾದ ಸಾವಿರಾರು ಮಹಿಳೆಯರ ಜೀವವನ್ನು ಇದು ಬಲಿ ತೆಗೆದುಕೊಂಡಿದೆ. ಇತರ ಕೆಲವು ಕ್ಯಾನ್ಸರ್ ಗಳಿಗಿಂತ ಭಿನ್ನವಾಗಿ, ಗರ್ಭಕಂಠದ ಕ್ಯಾನ್ಸರ್ ಅನ್ನು ಸಂಪೂರ್ಣವಾಗಿ ತಡೆಗಟ್ಟಬಹುದು. ಎಚ್ಪಿವಿ ಲಸಿಕೆ ಮತ್ತು ಆರಂಭಿಕ ಪತ್ತೆ ಪರೀಕ್ಷೆಗಳಲ್ಲಿ ಪ್ರಮುಖವಾಗಿದೆ. ಈ ರೋಗದಿಂದ ಯಾರೂ ಪ್ರಾಣ ಕಳೆದುಕೊಳ್ಳುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ನಮಗೆ ಮಾರ್ಗಗಳಿವೆ. ವಿಮರ್ಶಾತ್ಮಕ ಜಾಗೃತಿಯೊಂದಿಗೆ ಪರಸ್ಪರರನ್ನು ಸಬಲೀಕರಣಗೊಳಿಸೋಣ ಮತ್ತು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಪ್ರತಿಯೊಬ್ಬ ಮಹಿಳೆಗೆ ಮಾಹಿತಿ ನೀಡಲಾಗಿದೆ ಎಂದು ಖಚಿತಪಡಿಸಿಕೊಳ್ಳೋಣ” ಎಂದು ಬರೆದಿದ್ದಾರೆ.