ಪ್ಯಾರಿಸ್ ರೈಲ್ವೆ ನಿಲ್ದಾಣದಲ್ಲಿ ಚಾಕು ಇರಿತ: ಮೂವರಿಗೆ ಗಾಯ, ಶಂಕಿತನ ಬಂಧನ - Mahanayaka

ಪ್ಯಾರಿಸ್ ರೈಲ್ವೆ ನಿಲ್ದಾಣದಲ್ಲಿ ಚಾಕು ಇರಿತ: ಮೂವರಿಗೆ ಗಾಯ, ಶಂಕಿತನ ಬಂಧನ

03/02/2024


Provided by

ಪ್ಯಾರಿಸ್ ನ ಗ್ಯಾರೆ ಡಿ ಲಿಯಾನ್ ರೈಲ್ವೆ ನಿಲ್ದಾಣದಲ್ಲಿ ಶನಿವಾರ ನಡೆದ ಚಾಕು ದಾಳಿಯಲ್ಲಿ ಕನಿಷ್ಠ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಒಬ್ಬರಿಗೆ ಗಂಭೀರ ಗಾಯಗಳಾಗಿವೆ. ಆದರೆ ಅವರು ಮಾರಣಾಂತಿಕ ಪರಿಸ್ಥಿತಿಯಲ್ಲಿಲ್ಲ. ಇನ್ನಿಬ್ಬರಿಗೆ ಲಘು ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಶಂಕಿತ ದಾಳಿಕೋರನನ್ನು ಬಂಧಿಸಲಾಗಿದೆ.ದಾಳಿಯ ಹಿಂದಿನ ಉದ್ದೇಶಗಳನ್ನು ಇನ್ನೂ ಗುರುತಿಸಲಾಗಿಲ್ಲ. ತನಿಖೆ ‌ನಡೆಯುತ್ತಿದೆ.

ಇತ್ತೀಚಿನ ಸುದ್ದಿ