ಪ್ರಧಾನಿ ಮೋದಿ ಕಾರ್ಯಕ್ರಮ ಹಿನ್ನೆಲೆ: ಗೋವಾದಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ: ವ್ಯಾಪಕ ಟ್ರೋಲ್ ಆದ ಸುತ್ತೋಲೆ

06/02/2024
ಪ್ರಧಾನಿ ಮೋದಿ ಅವರ ಕಾರ್ಯಕ್ರಮಕ್ಕೆ ಜನರ ಕೊರತೆ ಕಾಡುತ್ತಿರುವಂತಿದೆ. ಈಗ ಆಸನ ತುಂಬಲು ವಿದ್ಯಾರ್ಥಿಗಳ ಮೊರೆ ಹೋಗಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಗೋವಾದ ಮಾರ್ಗೋವಾ ಪ್ರದೇಶದಲ್ಲಿ ಶಾಲೆ ಮತ್ತು ಕಾಲೇಜುಗಳಿಗೆ ಗಳಿಗೆ ರಜೆ ಘೋಷಿಸಲಾಗಿದೆ.
ಮೋದಿಯ ಕಾರ್ಯಕ್ರಮದಲ್ಲಿ ಹಾಜರಿರುವಂತೆ ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ.
ದಕ್ಷಿಣ ಗೋವಾದ ಮಾರ್ಗೋವಾ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ಮಂಗಳವಾರ ಮಧ್ಯಾಹ್ನದ ವೇಳೆಗೆ ಕಾಲೇಜುಗಳನ್ನು ಮುಚ್ಚಲಾಗುವುದು ಎಂದು ಗೋವಾ ಸರ್ಕಾರ ಘೋಷಿಸಿದೆ. ಕಳೆದ ವಾರ ಮಾರ್ಗೋವ್‌ನ ಎಲ್ಲಾ ಶಾಲೆಗಳನ್ನು ಮುಚ್ಚಲಾಗುವುದು ಎಂದು ಘೋಷಿಸಲಾಗಿತ್ತು.
ಈ ಸಂಬಂಧವಾಗಿ ಪ್ರಧಾನ ಮಂತ್ರಿಗಳ ಸಭೆಗೆ ಹಾಜರಾಗಲು ಪ್ರಾಂಶುಪಾಲರು ತಮ್ಮ ಸಂಸ್ಥೆಗಳ ವಿದ್ಯಾರ್ಥಿಗಳನ್ನು ಮಧ್ಯಾಹ್ನ 1 ಗಂಟೆಯೊಳಗೆ ಮಾರ್ಗೋವ್ ಕೆಟಿಸಿ ಬಸ್ ನಿಲ್ದಾಣಕ್ಕೆ ಕಳುಹಿಸಿಕೊಡಬೇಕು ಎಂದು ಗೋವಾ ಸರಕಾರದ ಉನ್ನತ ಶಿಕ್ಷಣ ನಿರ್ದೇಶನಾಲಯ ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಿದೆ.