ಸತತ 9 ಗಂಟೆಗಳ ಕಾರ್ಯಾಚರಣೆ ಸಕ್ಸಸ್ ಆಯಿತು: ಸಾವಿನ ದವಡೆಯಿಂದ ಪಾರಾಗಿ ಬಂದ 2 ವರ್ಷದ ಮಗು - Mahanayaka

ಸತತ 9 ಗಂಟೆಗಳ ಕಾರ್ಯಾಚರಣೆ ಸಕ್ಸಸ್ ಆಯಿತು: ಸಾವಿನ ದವಡೆಯಿಂದ ಪಾರಾಗಿ ಬಂದ 2 ವರ್ಷದ ಮಗು

07/02/2024


Provided by

ಕೊಳವೆ ಬಾವಿಗೆ ಬಿದ್ದಿದ್ದ ಎರಡು ವರ್ಷದ ಗಂಡು ಮಗುವನ್ನು ಸುರಕ್ಷಿತವಾಗಿ ರಕ್ಷಿಸಿದ ಘಟನೆ ಗುಜರಾತಿನ ಜಾಮ್‌ನಗರದ ಗೋವಾನಾ ಗ್ರಾಮದಲ್ಲಿ ನಡೆದಿದೆ.

ಮಂಗಳವಾರ ಸಂಜೆ 6.30ರ ಸುಮಾರಿಗೆ ಎರಡು ವರ್ಷದ ಗಂಡು ಮಗು ಆಳದ ಕೊಳವೆಬಾವಿಗೆ ಬಿದ್ದಿತ್ತು. ವಿಷಯ ತಿಳಿದ ಮನೆಯವರು ರಕ್ಷಣೆಗಾಗಿ ಮೊರೆಯಿಟ್ಟಿದ್ದರು. ಸತತ 9 ಗಂಟೆಗಳ ಕಾರ್ಯಾಚರಣೆ ನಡೆಸಿದ ರಕ್ಷಣಾ ತಂಡಗಳು ಬುಧವಾರ ಬೆಳಗಿನ ಜಾವ 4.30 ಕ್ಕೆ ಮಗುವನ್ನು ಕೊಳವೆ ಬಾವಿಯಿಂದ ಸುರಕ್ಷಿತವಾಗಿ ಹೊರ ತೆಗೆದಿದ್ದಾರೆ. ಮಗುವನ್ನು ತಕ್ಷಣವೇ ಚಿಕಿತ್ಸೆಗಾಗಿ ಜಾಮ್‌ನಗರದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

ಅಗ್ನಿಶಾಮಕ ದಳದ ಎರಡು ತಂಡಗಳು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳನ್ನು ರಕ್ಷಣಾ ಕಾರ್ಯಾಚರಣೆ ನಡೆಸಿದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಜನವರಿಯಲ್ಲಿ, ಗುಜರಾತ್‌ನ ದ್ವಾರಕಾ ಜಿಲ್ಲೆಯಲ್ಲಿ ಬೋರ್‌ವೆಲ್‌ಗೆ ಬಿದ್ದ ಮೂರು ವರ್ಷದ ಬಾಲಕಿಯನ್ನು ರಕ್ಷಿಸಿದ ಒಂದು ಗಂಟೆಯೊಳಗೆ ಆಸ್ಪತ್ರೆಗೆ ಕರೆದೊಯ್ಯುವಾಗ ಸಾವನ್ನಪ್ಪಿದ್ದಳು. ಏಂಜೆಲ್ ಸಖ್ರಾ ಎಂದು ಗುರುತಿಸಲಾದ ಬಾಲಕಿಯನ್ನು ಎಂಟು ಗಂಟೆಗಳ ಕಾರ್ಯಾಚರಣೆಯ ನಂತರ ರಕ್ಷಿಸಿ, ಖಂಭಾಲಿಯಾ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರಲ್ಲೇ ಆ ಮಗು ಸಾವನ್ನಪ್ಪಿತ್ತು.

ಇತ್ತೀಚಿನ ಸುದ್ದಿ