Karnataka Budget-2024: ಮದ್ಯದ ಬೆಲೆ ಮತ್ತೆ ಏರಿಕೆ: ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ - Mahanayaka

Karnataka Budget–2024: ಮದ್ಯದ ಬೆಲೆ ಮತ್ತೆ ಏರಿಕೆ: ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

karnataka budget 2024
16/02/2024

ಬೆಂಗಳೂರು: ಮದ್ಯದ ಘೋಷಿತ ಸ್ಲಾಬ್‌ಗಳನ್ನು ತರ್ಕಬದ್ಧಗೊಳಿಸುವ ಮೂಲಕ ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ IML, ಬಿಯರ್‌ ಸ್ಲಾಬ್‌ ಪರಿಷ್ಕರಣೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ​​ನಲ್ಲಿ ಘೋಷಿಸಿದರು.

ಕರ್ನಾಟಕ ಬಜೆಟ್ 2024 ಮಂಡಿಸಿದ ಸಿಎಂ ಸಿದ್ದರಾಮಯ್ಯ,  ಮದ್ಯದ ಬೆಲೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳನ್ನು ವಿವರಿಸಿದ್ದು, ಮದ್ಯದ ಬೆಲೆ ಮತ್ತೆ ಪರಿಷ್ಕರಣೆ ಮಾಡುವುದಾಗಿ ಹೇಳಿದ್ದಾರೆ.

2023–24ನೇ ಸಾಲಿನ ಜನವರಿ ತಿಂಗಳ ಅಂತ್ಯದವರೆಗೆ, ಅಬಕಾರಿ ತೆರಿಗೆಯಿಂದ 28,181 ಕೋಟಿ ರೂ.ಗಳು ಸ್ವೀಕೃತವಾಗಿರುತ್ತದೆ. 2024-25ನೇ ಸಾಲಿಗೆ 38,525 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿ