ನಕ್ಸಲ್ ಚಟುವಟಿಕೆ : ಕೇರಳದಲ್ಲಿ ಬಂಧಿತ ಶ್ರೀಮತಿಗೆ ನ್ಯಾಯಾಂಗ ಬಂಧನ
17/02/2024
ಚಿಕ್ಕಮಗಳೂರು: ನಕ್ಸಲ್ ಚಟುವಟಿಕೆಯ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಶ್ರೀಮತಿಗೆ ಎನ್.ಆರ್.ಪುರ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಚಿಕ್ಕಮಗಳೂರು ಜಿಲ್ಲೆ ಮೂಲದ ಶ್ರೀಮತಿಯ ವಿರುದ್ಧ ಸುಮಾರು 9ಕ್ಕೂ ಹೆಚ್ಚು ಪ್ರಕರಣಗಳಿದ್ದವು. ಕರಪತ್ರ ಹಂಚಿಕೆ, ಬ್ಯಾನರ್ ಕಟ್ಟಿದ್ದು, ಸರ್ಕಾರಿ ಆಸ್ತಿ ನಷ್ಟ, ವಿದ್ವಂಸಕ ಕೃತ್ಯದ ಸಂಚು, ಆಯುಧಗಳನ್ನ ಇಟ್ಟುಕೊಂಡಿದ್ದು, ಟೆಂಟ್ ಹಾಕಿದ್ದು, ಗನ್ ತೋರಿಸಿ ಹೆದರಿಸಿ ಸುಲಿಗೆ, ಪೊಲೀಸರಿಗೆ ಸಪೋರ್ಟ್ ಮಾಡದಂತೆ ಬೆದರಿಸಿದ್ದು ಮೊದಲಾದ ಆರೋಪಗಳು ಶ್ರೀಮತಿ ಮೇಲಿದೆ.
ಕೇರಳದಲ್ಲಿ ಬಂಧನವಾಗಿದ್ದ ಶ್ರೀಮತಿಯನ್ನು ಕಾರ್ಕಳ ಪೊಲೀಸರ ವಶದಲ್ಲಿದ್ದಳು. ಕಾರ್ಕಳ ಪೊಲೀಸರ ಬಳಿಯಿಂದ ಶೃಂಗೇರಿ ಪೊಲೀಸರು ವಶಕ್ಕೆ ಪಡೆದು ಎನ್.ಆರ್.ಪುರ ಕೋರ್ಟ್ ಗೆ ಹಾಜರುಪಡಿಸಿದ್ದಾರೆ.




























