“ಮಹಾರಾಷ್ಟ್ರದಲ್ಲಿ ಅಮಿತಾಭ್ ಬಚ್ಚನ್, ಅಕ್ಷಯ್ ಕುಮಾರ್ ಚಿತ್ರಗಳಿಗೆ ಅನುಮತಿ ಇಲ್ಲ” - Mahanayaka
4:34 PM Wednesday 10 - December 2025

“ಮಹಾರಾಷ್ಟ್ರದಲ್ಲಿ ಅಮಿತಾಭ್ ಬಚ್ಚನ್, ಅಕ್ಷಯ್ ಕುಮಾರ್ ಚಿತ್ರಗಳಿಗೆ ಅನುಮತಿ ಇಲ್ಲ”

18/02/2021

ಮುಂಬೈ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿಚಾರದಲ್ಲಿ ಜನ ಸಾಮಾನ್ಯರು ಸಂಕಷ್ಟದಲ್ಲಿದ್ದಾರೆ. ಹಿಂದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಟರಾದ ಅಮಿತಾಬ್ ಬಚ್ಚನ್ ಮತ್ತು ಅಕ್ಷಯ್ ಕುಮಾರ್ ವಿರೋಧ ವ್ಯಕ್ತಪಡಿಸಿದ್ದರು. ಈಗ ಅವರು ತಮ್ಮ ನಿಲುವಿನ ಬಗ್ಗೆ ಸ್ಪಷ್ಟಪಡಿಸಬೇಕು ಎಂದು  ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಹೇಳಿದ್ದಾರೆ.

ನಟರಾದ ಅಮಿತಾಬ್ ಬಚ್ಚನ್ ಮತ್ತು ಅಕ್ಷಯ್ ಕುಮಾರ್ ಅವರು ಇಂಧನ ಬೆಲೆ ಏರಿಕೆ ವಿಷಯದಲ್ಲಿ ನಿಲುವು ತೆಗೆದುಕೊಳ್ಳದಿದ್ದರೆ, ಅವರ ಚಲನಚಿತ್ರಗಳ ಪ್ರದರ್ಶನ ಮತ್ತು ರಾಜ್ಯದಲ್ಲಿ ಚಿತ್ರೀಕರಣಗಳಿಗೆ ಅನುಮತಿ ನೀಡುವುದಿಲ್ಲ ಎಂದು ಅವರು ಹೇಳಿದ್ದಾರೆ.

ಯುಪಿಎ ಸರ್ಕಾರದ ಅವಧಿಯಲ್ಲಿ ಬಚ್ಚನ್ ಮತ್ತು ಅಕ್ಷಯ್ ಕುಮಾರ್ ಇಂಧನ ಬೆಲೆ ಏರಿಕೆಯ ಬಗ್ಗೆ ಟ್ವೀಟ್ ಮಾಡಿದ್ದರು, ಆದರೆ ಈಗ ಈ ವಿಷಯದ ಬಗ್ಗೆ ಮೌನವಾಗಿದ್ದಾರೆ ಎಂದು  ಅವರು ಹೇಳಿದರು.

ಇತ್ತೀಚಿನ ಸುದ್ದಿ