ಸ್ವಲ್ಪ ಅಭಿವೃದ್ಧಿಯನ್ನು ಮಾಡಿದ್ದರೆ ಈಗ ಕುಕ್ಕರ್ ಹಂಚುವ ಪ್ರಮೇಯ ಬರುತ್ತಿರಲಿಲ್ಲ: ಡಿ.ಕೆ.ಸುರೇಶ್ ವಿರುದ್ಧ ಬಿಜೆಪಿ ಕಿಡಿ

ಬೆಂಗಳೂರು: ಲೋಕಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ. ಕೆ. ಸುರೇಶ್ ವಿರುದ್ಧ ಮತದಾರರಿಗೆ ಕುಕ್ಕರ್ ಹಂಚುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ.
ತನ್ನ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಬಿಜೆಪಿ, ಕುಕ್ಕರ್ ಬಾಂಬ್ ಬ್ಲಾಸ್ಟ್ ಮಾಡಿದ ಬ್ರದರ್ಸ್ ಗಳ ಬ್ರದರ್ ರಿಂದ ಕುಕ್ಕರ್ ಹಂಚಲಾಗುತ್ತಿದೆ. ದೇಶ ವಿಭಜನೆ ಮಾಡುವ ಸಂಚು ರೂಪಿಸಿದ್ದ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್ ಅವರಿಗೆ ಚುನಾವಣೆ ಘೋಷಣೆ ಮುನ್ನವೇ ಸೋಲಿನ ಭೀತಿ ಶುರುವಾಗಿದೆ ಎಂದು ವ್ಯಂಗ್ಯವಾಡಿದೆ.
ಗೂಂಡಾಗಿರಿ ಮಾಡುವ ಜೊತೆಗೆ ಸ್ವಲ್ಪ ಅಭಿವೃದ್ಧಿಯನ್ನು ಮಾಡಿದ್ದರೆ ಈಗ ಊರಿಗಿಂತ ಮುಂಚೆ ಮತದಾರರಿಗೆ ಕುಕ್ಕರ್ ಹಂಚುವ ಪ್ರಮೇಯ ಬರುತ್ತಿರಲಿಲ್ಲಾ ಎಂದು ಬಿಜೆಪಿ ಹೇಳಿದೆ.
ಮತದಾರರಿಗೆ ಕುಕ್ಕರ್ ಆಮಿಷ ಒಡ್ಡುತ್ತಿರುವ ಸಂಸದ ಡಿ.ಕೆ. ಸುರೇಶ್ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ಮನವಿ ಮಾಡಿಕೊಂಡಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth