ಸಂದೇಶ್‌ಖಾಲಿ ಪ್ರಕರಣ: ತೃಣಮೂಲ ಕಾಂಗ್ರೆಸ್ ನ ಶೇಖ್ ಶಹಜಹಾನ್ ಬಂಧನ

ಪಶ್ಚಿಮ ಬಂಗಾಳದ ಸಂದೇಶ್ ಖಾಲಿಯಲ್ಲಿ ಹಲವಾರು ಮಹಿಳೆಯರಿಂದ ಲೈಂಗಿಕ ದೌರ್ಜನ್ಯ ಮತ್ತು ಭೂ ಕಬಳಿಕೆ ಆರೋಪ ಎದುರಿಸುತ್ತಿರುವ ತೃಣಮೂಲ ಕಾಂಗ್ರೆಸ್ ಮುಖಂಡ ಶೇಖ್ ಶಹಜಹಾನ್ ಅವರನ್ನು 55 ದಿನಗಳ ನಂತರ ಗುರುವಾರ ಬೆಳಿಗ್ಗೆ ಬಂಧಿಸಲಾಗಿದೆ.
ಉತ್ತರ 24 ಪರಗಣದ ಮಿನಾಖಾನ್ ಪ್ರದೇಶದಿಂದ 53 ವರ್ಷದ ತೃಣಮೂಲ ನಾಯಕನನ್ನು ಬಂಧಿಸಲಾಗಿದ್ದು, ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿ ಅಮಿನುಲ್ ಇಸ್ಲಾಂ ಖಾನ್ ತಿಳಿಸಿದ್ದಾರೆ.
ತೃಣಮೂಲ ನಾಯಕನ ವಿರುದ್ಧ ಕ್ರಮ ತೆಗೆದುಕೊಳ್ಳಲು ವಿಳಂಬ ಮಾಡಿದ್ದಕ್ಕಾಗಿ ಕೋಲ್ಕತ್ತಾ ಹೈಕೋರ್ಟ್ ರಾಜ್ಯ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಮೂರು ದಿನಗಳ ನಂತರ ಈ ಬಂಧನ ನಡೆದಿದೆ.
ಸಂದೇಶ್ ಖಾಲಿಯಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಶಹಜಹಾನ್ ಶೇಖ್ ಮತ್ತು ಅವರ ಬೆಂಬಲಿಗರ ವಿರುದ್ಧ ಭೂ ಕಬಳಿಕೆ ಮತ್ತು ಬಲವಂತದ ಮೇರೆಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದರು. ಶೇಖ್ ಮತ್ತು ಅವರ ಸಹಚರರನ್ನು ಬಂಧಿಸುವಂತೆ ಒತ್ತಾಯಿಸಿ ನದಿ ತೀರದ ಪ್ರದೇಶವು ಒಂದು ತಿಂಗಳಿಗೂ ಹೆಚ್ಚು ಕಾಲ ಸರಣಿ ಪ್ರತಿಭಟನೆ ನಡೆಯುತ್ತಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth