ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಯಾತ್ರಿಕ ಹೃದಯಾಘಾತದಿಂದ ಸಾವು - Mahanayaka
11:03 PM Thursday 18 - September 2025

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಯಾತ್ರಿಕ ಹೃದಯಾಘಾತದಿಂದ ಸಾವು

madhusudhan
02/03/2024

ಕೊಟ್ಟಿಗೆಹಾರ:  ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಯಾತ್ರಿಕರೊಬ್ಬರು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ.

ಬೆಂಗಳೂರು ನಿವಾಸಿ ಮಧುಸೂಧನ್ (52) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಬೆಂಗಳೂರಿನಿಂದ 12 ಜನರ ತಂಡ ಟಿಟಿ ವಾಹನದಲ್ಲಿ ಧರ್ಮಸ್ಥಳಕ್ಕೆ ಹೊರಟಿದ್ದರು. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಶೌಚಾಲಯಕ್ಕೆ ತೆರಳಿದ್ದ ವೇಳೆ ಈ ತಂಡದಲ್ಲಿದ್ದ ಮಧುಸೂದನ್ ಅವರಿಗೆ  ಹೃದಯಾಘಾತವಾಗಿದೆ.

ಕೂಡಲೇ ಸಮಾಜ ಸೇವಕ ಆರೀಫ್ ಅವರು ಅಂಬುಲೆನ್ಸ್ ನಲ್ಲಿ ಮಧುಸೂದನ್ ಅವರನ್ನು ಬಣಕಲ್‌ ಆಸ್ಪತ್ರೆಗೆ ಕರೆದೊಯ್ದು ಪ್ರಾಣ ರಕ್ಷಣೆಗೆ ಮುಂದಾಗಿದ್ದಾರೆ. ಆದರೆ  ಮಾರ್ಗ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.

ಇತ್ತೀಚಿನ ಸುದ್ದಿ