ಬಿಜೆಪಿ ಅವಧಿಯಲ್ಲೂ ಬಾಂಬ್ ಸ್ಫೋಟ ನಡೆದಿದೆ: ಪ್ರಮೋದ್ ಮುತಾಲಿಕ್

04/03/2024
ಕಾರವಾರ: ಬಾಂಬ್ ಸ್ಫೋಟವಾಗಲು ಎರಡೂ ರಾಷ್ಟ್ರೀಯ ಪಕ್ಷಗಳು ಕಾರಣ ಎಂದು ಬಿಜೆಪಿ ಹಾಗೂ ಕಾಂಗ್ರೆಸ್ ವಿರುದ್ಧ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ,.
ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ರಾಜಕೀಯ ಪಕ್ಷಗಳ ಹೇಳಿಕೆಗಳು ತನಿಖೆಯ ದಾರಿ ತಪ್ಪಿಸುವಂತಿದೆ. ಈ ಹಿಂದೆ ಬಿಜೆಪಿ ಅವಧಿಯಲ್ಲೂ ಸ್ಫೋಟ ನಡೆದಿತ್ತು, ಕಾಂಗ್ರೆಸ್ ಅವಧಿಯಲ್ಲೂ ನಡೆದಿದೆ. ಎರಡೂ ರಾಜಕೀಯ ಪಕ್ಷಗಳ ನಿರ್ಲಕ್ಷ್ಯದ ಪರಿಣಾಮ ಪದೇ ಪದೇ ಬಾಂಬ್ ಸ್ಫೋಟಕ್ಕೆ ಕಾರಣವಾಗುತ್ತಿದೆ ಎಂದು ಅವರು ಆರೋಪಿಸಿದರು.
ಈ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರದ ಬದಲು ಎಎನ್ ಐಗೆ ಒಪ್ಪಿಸಬೇಕು, ರಾಜ್ಯ ಸರ್ಕಾರ ಪೊಲೀಸರ ಕೈ ಕಟ್ಟಿ ಹಾಕಿದೆ, ಪೊಲೀಸರನ್ನು ಫ್ರೀಯಾಗಿ ತನಿಖೆ ನಡೆಸಲು ಬಿಡುತ್ತಿಲ್ಲ ಎಂದು ಅವರು ಆರೋಪಿಸಿದರು.