ಪಾಟ್ನಾ ರೈಲ್ವೆ ನಿಲ್ದಾಣದ ಬಳಿ ಬೆಂಕಿ: ಗಂಟೆಗಳ ಕಾಲ ರೈಲು ಕಾರ್ಯಾಚರಣೆ ಸ್ಥಗಿತ - Mahanayaka
11:42 AM Wednesday 25 - March 2026

ಪಾಟ್ನಾ ರೈಲ್ವೆ ನಿಲ್ದಾಣದ ಬಳಿ ಬೆಂಕಿ: ಗಂಟೆಗಳ ಕಾಲ ರೈಲು ಕಾರ್ಯಾಚರಣೆ ಸ್ಥಗಿತ

05/03/2024

ಬಿಹಾರದ ಪಾಟ್ನಾದ ರೈಲ್ವೆ ನಿಲ್ದಾಣದ ಬಳಿ ಭಾರಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಹೀಗಾಗಿ ರೈಲು ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಕೊಲ್ಕತ್ತಾದಿಂದ ತೆರಳುತ್ತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಸಮೀಪವೇ ಬೆಂಕಿ ಕಾಣಿಸಿಕೊಂಡಿದ್ದು, ಪಾಟ್ನಾದ ಗುಲ್ಜಾರ್ಬಾಗ್ ರೈಲ್ವೆ ನಿಲ್ದಾಣದಲ್ಲಿ ನಿಂತಿದೆ.

ರೈಲ್ವೆ ಮಾರ್ಗದ ಸಂಪರ್ಕಕ್ಕೆ ಬಂದ ನಿಲ್ದಾಣದಲ್ಲಿ ಹೈಟೆನ್ಷನ್ ವಿದ್ಯುತ್ ತಂತಿಯ ಮೇಲೆ ಮರ ಬಿದ್ದ ನಂತರ ಬೆಂಕಿ ಕಾಣಿಸಿಕೊಂಡಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಸುಮಾರು ನಾಲ್ಕು ಗಂಟೆಗಳ ಕಾಲ ರೈಲುಗಳ ಕಾರ್ಯಾಚರಣೆಯನ್ನು ನಿಲ್ಲಿಸಿದ ನಂತರ ಹತ್ತಿರದ ರಾಜೇಂದ್ರನಗರ ರೈಲ್ವೆ ನಿಲ್ದಾಣದ ಸಿಬ್ಬಂದಿ ಮತ್ತು ಇತರ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

 

ಇತ್ತೀಚಿನ ಸುದ್ದಿ