ಅಪಹರಣ, ಸುಲಿಗೆ ಪ್ರಕರಣ: ಮಾಜಿ ಸಂಸದ ಧನಂಜಯ್ ಸಿಂಗ್ ಗೆ 7 ವರ್ಷ ಜೈಲು ಶಿಕ್ಷೆ - Mahanayaka

ಅಪಹರಣ, ಸುಲಿಗೆ ಪ್ರಕರಣ: ಮಾಜಿ ಸಂಸದ ಧನಂಜಯ್ ಸಿಂಗ್ ಗೆ 7 ವರ್ಷ ಜೈಲು ಶಿಕ್ಷೆ

06/03/2024


Provided by

ಅಪಹರಣ, ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಜೌನ್ಪುರದ ಮಾಜಿ ಸಂಸದ ಧನಂಜಯ್ ಸಿಂಗ್ ರಿಗೆ 7 ವರ್ಷಗಳ ಜೈಲು ಶಿಕ್ಷೆ ಮತ್ತು 50,000 ರೂಪಾಯಿ ದಂಡ ವಿಧಿಸಲಾಗಿದೆ. ಅವರು ಇನ್ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ. ನ್ಯಾಯಾಲಯದಲ್ಲಿ ಅವರು ತನ್ನನನ್ನು ನಿರಪರಾಧಿ ಮತ್ತು ತಪ್ಪಾಗಿ ಸಿಲುಕಿಸಲಾಗಿದೆ ಎಂದು ನ್ಯಾಯಾಧೀಶರಿಗೆ ತಿಳಿಸಿದರು. ತಮ್ಮ ರಾಜಕೀಯ ವರ್ಚಸ್ಸಿಗೆ ಧಕ್ಕೆಯಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಇದಕ್ಕೂ ಮುನ್ನ ಮಂಗಳವಾರ, ನಮಾಮಿ ಗಂಗೆಯ ಯೋಜನಾ ವ್ಯವಸ್ಥಾಪಕ ಮತ್ತು ಮುಜಾಫರ್ ನಗರದ ನಿವಾಸಿ ಅಭಿನವ್ ಸಿಂಘಾಲ್ ಅವರನ್ನು ಅಪಹರಿಸಿ ಸುಲಿಗೆ ಮಾಡಿದ ಪ್ರಕರಣದಲ್ಲಿ ಜೌನ್ಪುರದ ನ್ಯಾಯಾಲಯವು ಅವರನ್ನು ದೋಷಿ ಎಂದು ಘೋಷಿಸಿತ್ತು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ