ಆ್ಯಸಿಡ್ ನಿಷೇಧಕ್ಕೆ ಇನ್ನೆರಡು ದಿನಗಳಲ್ಲಿ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್

07/03/2024
ಬೆಂಗಳೂರು: ಆ್ಯಸಿಡ್ ನಿಷೇಧದ ಬಗ್ಗೆ ರಾಜ್ಯ ಪೊಲೀಸರ ಮಹಾನಿರ್ದೇಶಕರು ಸಂಬಂಧಪಟ್ಟ ಇಲಾಖೆಗೆ ಪತ್ರ ಬರೆಯಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ್ಯಸಿಡ್ ದುರ್ಬಳಕೆಯಾಗುತ್ತಿದ್ದು, ಮಹಿಳೆಯರು ದೌರ್ಜನ್ಯಕ್ಕೊಳಗಾಗುತ್ತಿದ್ದಾರೆ. ಎಲ್ಲರ ಕೈಗೂ ಸುಲಭವಾಗಿ ಆ್ಯಸಿಡ್ ಸಿಗಬಾರದು. ಅಗತ್ಯತೆ ಇರುವವರಿಗೆ ಮಾತ್ರವೇ ಸಿಗಬೇಕು ಎಂದು ಅವರು ಹೇಳಿದರು.
ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಅವರು ಸಂಬಂಧಪಟ್ಟ ಇಲಾಖೆ ಹಾಗೂ ಉದ್ಯಮಗಳಿಗೆ ಪತ್ರ ಬರೆದು ಕ್ರಮಕೈಗೊಳ್ಳಲಿದ್ದಾರೆ ಎಂದು ಅವರು ಇದೇ ವೇಳೆ ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth