ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಕಾಂಗ್ರೆಸ್ ಮಹತ್ವದ ಸಭೆ: ವಯನಾಡ್ ನಿಂದ ರಾಹುಲ್ ಗಾಂಧಿ ಸ್ಪರ್ಧೆ

ಮುಂಬರುವ ಲೋಕಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಕಾಂಗ್ರೆಸ್ ನ ಕೇಂದ್ರ ಚುನಾವಣಾ ಸಮಿತಿಯ (ಸಿಇಸಿ) ನಿರ್ಣಾಯಕ ಸಭೆ ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ನಡೆಯಿತು. ಈ ಸಿಇಸಿ ಸಭೆಯಲ್ಲಿ ಕೇರಳದ ವಯನಾಡ್ ಕ್ಷೇತ್ರದಿಂದ ರಾಹುಲ್ ಗಾಂಧಿ ಅವರ ಹೆಸರನ್ನು ಲೋಕಸಭಾ ಚುನಾವಣೆಗೆ ಖಚಿತಪಡಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತು ಹಲವಾರು ಹಿರಿಯ ನಾಯಕರು ಭಾಗವಹಿಸಿದ್ದರು.
ಈ ನಿರ್ಣಾಯಕ ಸಿಇಸಿ ಸಭೆಯು ದೆಹಲಿ, ಛತ್ತೀಸ್ ಗಢ, ಕರ್ನಾಟಕ, ತೆಲಂಗಾಣ, ಲಕ್ಷದ್ವೀಪ, ಕೇರಳ, ಮೇಘಾಲಯ, ತ್ರಿಪುರಾ, ಸಿಕ್ಕಿಂ, ಮಣಿಪುರ ಸೇರಿದಂತೆ ಅನೇಕ ರಾಜ್ಯಗಳ ಅಭ್ಯರ್ಥಿಗಳ ಆಯ್ಕೆಯ ಮೇಲೆ ಕೇಂದ್ರೀಕರಿಸಿತ್ತು.
ಕಾಂಗ್ರೆಸ್ ಸಿಇಸಿ ಸಭೆಯ ಬಗ್ಗೆ ಮಾತನಾಡಿದ ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್, “ಸಿಇಸಿಯು ಎಲ್ಲಾ ಸ್ಥಾನಗಳ ಬಗ್ಗೆ ಚರ್ಚಿಸುತ್ತದೆ. ಸಾಧ್ಯವಾದಷ್ಟು ಅಂತಿಮ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ಸಿಇಸಿ ಅಭ್ಯರ್ಥಿಗಳನ್ನು ಚರ್ಚಿಸುವ ಮತ್ತು ಅಂತಿಮಗೊಳಿಸುವ ಅತ್ಯುನ್ನತ ಸಂಸ್ಥೆಯಾಗಿದೆ” ಎಂದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth