ಅಂತಾರಾಷ್ಟ್ರೀಯ ಮಹಿಳಾ ದಿನ ಹಿನ್ನೆಲೆ: ಎಲ್ ಪಿಜಿ ಬೆಲೆಯಲ್ಲಿ ₹ 100 ಕಡಿತ; ಪ್ರಧಾನಿ ಹೇಳಿಕೆ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯಲ್ಲಿ 100 ರೂ.ಗೆ ಇಳಿಸುವುದಾಗಿ ಘೋಷಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, “ಇಂದು, ಮಹಿಳಾ ದಿನದಂದು, ನಮ್ಮ ಸರ್ಕಾರ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು 100 ರೂ.ಗಳಷ್ಟು ಕಡಿಮೆ ಮಾಡಲು ನಿರ್ಧರಿಸಿದೆ” ಎಂದಿದ್ದಾರೆ.
ಇದು ದೇಶಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ. ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ಗ್ಯಾಸನ್ನು ಹೆಚ್ಚು ಕೈಗೆಟುಕುವಂತೆ ಮಾಡುವ ಮೂಲಕ ನಾವು ಕುಟುಂಬಗಳ ಯೋಗಕ್ಷೇಮವನ್ನು ಬೆಂಬಲಿಸುವ ಮತ್ತು ಆರೋಗ್ಯಕರ ವಾತಾವರಣವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದ್ದೇವೆ. ಇದು ಮಹಿಳೆಯರನ್ನು ಸಬಲೀಕರಣಗೊಳಿಸುವ ಮತ್ತು ಅವರಿಗೆ ‘ಸುಗಮ ಜೀವನ’ವನ್ನು ಖಾತ್ರಿಪಡಿಸುವ ನಮ್ಮ ಬದ್ಧತೆಗೆ ಅನುಗುಣವಾಗಿದೆ ಎಂದು ಅವರು ಬರೆದಿದ್ದಾರೆ.
ಮಾರ್ಚ್ 1 ರಂದು ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) 19 ಕೆಜಿ ವಾಣಿಜ್ಯ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಗಳ ಬೆಲೆಯನ್ನು ಹೆಚ್ಚಿಸುವುದಾಗಿ ಘೋಷಿಸಿದ್ದವು.
ಈ ಹೆಚ್ಚಳದೊಂದಿಗೆ 19 ಕೆಜಿ ವಾಣಿಜ್ಯ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ದೆಹಲಿಯಲ್ಲಿ 1,795.00 ರೂ.ಗೆ ಲಭ್ಯವಿದೆ.
ವಾಣಿಜ್ಯ ಅನಿಲ ಸಿಲಿಂಡರ್ ಗಳ ಪರಿಷ್ಕೃತ ಬೆಲೆ ಕೋಲ್ಕತ್ತಾದಲ್ಲಿ 1,911.00 ರೂ., ಮುಂಬೈನಲ್ಲಿ 1,749.00 ರೂ., ಚೆನ್ನೈನಲ್ಲಿ 1,960.50 ರೂಪಾಯಿ ಆಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth