ಮದುವೆಗೆ ಕೆಲವೇ ಗಂಟೆ ಬಾಕಿ ಇರುವಾಗ ಮದುಮಗನನ್ನು ಇರಿದು ಕೊಂದ ಪಾಪಿ ತಂದೆ!
ನವದೆಹಲಿ: ಮದುವೆಗೆ ಕೆಲವೇ ಗಂಟೆಗಳ ಮೊದಲು ಮದುಮಗನನ್ನು ಹೆತ್ತ ತಂದೆಯೆ ಬರ್ಬರವಾಗಿ ಇರಿದು ಹತ್ಯೆ ಮಾಡಿದ ಘಟನೆ ದಕ್ಷಿಣ ದೆಹಲಿಯಲ್ಲಿ ನಡೆದಿದೆ.
ಮೃತವ್ಯಕ್ತಿಯನ್ನು ಗೌರವ್ ಸಿಂಘಾಲ್ ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿಯು ಜಿಮ್ ತರಬೇತುದಾರನಾಗಿದ್ದ. ಹತ್ಯೆಯ ಹಿಂದಿನ ಕಾರಣ ಇನ್ನೂ ನಿಗೂಢವಾಗಿದೆ.
ಮನೆಯಲ್ಲಿ ಮದುವೆ ತಯಾರಿ ನಡೆಯುತ್ತಿದ್ದು, ಮುಂಜಾನೆ ಗೌರವ್ ಸಿಂಘಾಲ್ ನನ್ನು ಆರೋಪಿ ತಂದೆಯು ಆತನ ಮುಖ ಮತ್ತು ಎದೆಗೆ 15 ಬಾರಿ ಇರಿದು ಸ್ಥಳದಿಂದ ಪಾರಾರಿಯಾಗಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಆದಾಗಲೇ ಆತ ಮೃತಪಟ್ಟಿದ್ದ.
ಮೃತ ಸಿಂಘಾಲ್ ಬೇರೊಬ್ಬಳು ಯುವತಿಯನ್ನು ಪ್ರೀತಿಸುತ್ತಿದ್ದ ಮತ್ತು ಅವಳನ್ನು ಮದುವೆಯಾಗುತ್ತೇನೆ ಎಂದು ಹೇಳಿದ್ದ. ಆದರೆ ಆತನ ತಂದೆ ಬೇರೆ ಹುಡುಗಿ ಜೊತೆ ಮದುವೆ ನಡೆಸಲು ನಿರ್ಧರಿಸಿದ್ದರು. ಆದರೆ ಬಲವಂತದ ಮದುವೆ ಗೌರವ್ ಗೆ ಇಷ್ಟವಿರಲಿಲ್ಲ ಎನ್ನುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಕೃತ್ಯ ನಡೆದ ಕೊಠಡಿ ಮತ್ತು ಸುತ್ತಮುತ್ತಲಿನ ಪರಿಶೀಲಿಸಿದ ಪೋಲಿಸರು ವಿವಿಧ ಬಗೆಯ ಹಲವಾರು ಶೂ ಗುರುತುಗಳನ್ನು ಪತ್ತೆ ಹಚ್ಚಿದ್ದಾರೆ. ಹೀಗಾಗಿ ಕೊಲೆಯಲ್ಲಿ ಒಂದಕ್ಕಿಂತ ಹೆಚ್ಚು ವ್ಯಕ್ತಿಗಳು ಭಾಗಿಯಾಗಿದ್ದಾರೆ ಎಂದು ಶಂಕಿಸಿದ್ದಾರೆ. ಇನ್ನು ಈ ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನೂ ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗೌರವ್ ನ ಮೃತದೇಹವನ್ನು ಶವಪರೀಕ್ಷೆಗಾಗಿ ಏಮ್ಸ್ ಶವಾಗಾರಕ್ಕೆ ರವಾನಿಸಿದ್ದು, ಪೋಲಿಸರು ತನಿಖೆ ಆರಂಭಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth




























