ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಶಾಸಕ ವಾಸು ಇನ್ನಿಲ್ಲ

ಮೈಸೂರು: ಕಾಂಗ್ರೆಸ್ ನ ಹಿರಿಯ ನಾಯಕ ಹಾಗೂ ಮಾಜಿ ಶಾಸಕರಾದ ವಾಸು(72) ಇಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೈಸೂರಿನ ಚಾಮರಾಜ ಕ್ಷೇತ್ರದ ಕಾಂಗ್ರೆಸ್ ನ ಮಾಜಿ ಶಾಸಕ ವಾಸು ಅವರು ವಯೋಸಹಜ ಅಂಗಾಂಗ ವೈಫಲ್ಯದ ಹಿನ್ನೆಲೆಯಲ್ಲಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅವರಿಂದು ಕೊನೆಯುಸಿರೆಳೆದರು.
ಮೈಸೂರು ಮೇಯರ್ ಆಗಿಯು ಕಾರ್ಯನಿರ್ವಹಿಸಿದ್ದಾದ್ದ ಇವರು 2014ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು. ಈ ಬಾರಿ ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿಯವರಿಗೆ ಆಪ್ತರಾಗಿದ್ದ ವಾಸುರವರು ಮೊಯ್ಲಿ ಅವಧಿಯಲ್ಲಿ ಸಿಎಂ ಅವರ ರಾಜಕೀಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth