ಶಾಕ್: ಲೋಕಸಭಾ ಚುನಾವಣೆಗೂ ಮುನ್ನವೇ ಚುನಾವಣಾ ಆಯುಕ್ತ ಅರುಣ್ ಗೋಯಲ್ ರಾಜೀನಾಮೆ

2024 ರ ಲೋಕಸಭಾ ಚುನಾವಣೆಗೆ ಮುಂದಿರುವ ಕೆಲವೇ ವಾರಗಳ ಮೊದಲು ಭಾರತದ ಚುನಾವಣಾ ಆಯುಕ್ತ ಅರುಣ್ ಗೋಯೆಲ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಯ ದಿನಾಂಕಗಳನ್ನು ಚುನಾವಣಾ ಆಯೋಗ ಘೋಷಿಸುವ ನಿರೀಕ್ಷೆ ಮಾಡುತ್ತಿದ್ದ ಸಮಯದಲ್ಲೇ ಇವರು ನೀಡಿರುವ ರಾಜೀನಾಮೆ ಅಚ್ಚರಿ ಮೂಡಿಸಿದೆ.
1985 ರ ಬ್ಯಾಚ್ನ ಪಂಜಾಬ್ ಕೇಡರ್ನ ನಿವೃತ್ತ ಐಎಎಸ್ ಅಧಿಕಾರಿ ಅರುಣ್ ಗೋಯೆಲ್ ಅವರು 2022 ರ ಡಿಸೆಂಬರ್ 31 ರಂದು ಭಾರೀ ಕೈಗಾರಿಕಾ ಸಚಿವಾಲಯದ ಕಾರ್ಯದರ್ಶಿಯಾಗಿ ತಮ್ಮ ಅಧಿಕಾರಾವಧಿಯನ್ನು ಮುಕ್ತಾಯಗೊಳಿಸಬೇಕಿತ್ತು. ಆದರೆ ನಿವೃತ್ತಿಗೆ ಸುಮಾರು ಆರು ವಾರಗಳ ಮೊದಲೇ ಗೋಯೆಲ್ ಸೇವೆಯಿಂದ ಸ್ವಯಂ ನಿವೃತ್ತಿಯನ್ನು ಘೋಷಿಸಿದ್ದಾರೆ.
ನಿವೃತ್ತಿಯ ನಂತರ ಅವರನ್ನು ಚುನಾವಣಾ ಆಯುಕ್ತರಾಗಿ ನೇಮಿಸಲಾಗಿತ್ತು. ಸುಶೀಲ್ ಚಂದ್ರ ಅವರ ನಿವೃತ್ತಿಯಿಂದ ತೆರವಾದ ಸ್ಥಾನವನ್ನು ಇವರು ತುಂಬಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth