ಟೈರ್ ಸ್ಫೋಟಗೊಂಡು ಮಧ್ಯದಲ್ಲಿ ನಿಂತ ಕಾರಿಗೆ ಹಿಂದಿನಿಂದ ಬಂದ ಮತ್ತೊಂದು ಕಾರು ಡಿಕ್ಕಿ: 6 ಮಂದಿ ಸಾವು - Mahanayaka

ಟೈರ್ ಸ್ಫೋಟಗೊಂಡು ಮಧ್ಯದಲ್ಲಿ ನಿಂತ ಕಾರಿಗೆ ಹಿಂದಿನಿಂದ ಬಂದ ಮತ್ತೊಂದು ಕಾರು ಡಿಕ್ಕಿ: 6 ಮಂದಿ ಸಾವು

11/03/2024


Provided by

ಹರಿಯಾಣದ ರೇವಾರಿಯಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು ಇಬ್ಬರು ಪುರುಷರು ಸೇರಿದ್ದಾರೆ.

‘ರಾತ್ರಿ ನಮಗೆ ಕರೆ ಬಂತು. ಟೈರ್ ಸ್ಫೋಟಗೊಂಡು ಕಾರು ಮಧ್ಯದಲ್ಲಿ ನಿಂತಾಗ ಇನ್ನೊಂದು ಕಾರು ಹಿಂದಿನಿಂದ ಬಂದು ಡಿಕ್ಕಿ ಹೊಡೆದು ಪಲ್ಟಿಯಾಗಿ ಕಂದಕಕ್ಕೆ ಬಿದ್ದಿದೆ ಎಂದು ಧರುಹೇರಾ ಸ್ಟೇಷನ್ ಹೌಸ್ ಅಧಿಕಾರಿ ಜಗದೀಶ್ ಎಎನ್ಐಗೆ ತಿಳಿಸಿದ್ದಾರೆ.

ಗಾಯಗೊಂಡವರ ಸ್ಥಿತಿಯ ಬಗ್ಗೆ ವಿವರಗಳನ್ನು ಹಂಚಿಕೊಂಡ ಎಸ್ಎಚ್ಒ, “ಟೈರ್ ಸ್ಫೋಟಗೊಂಡ ನಂತರ ನಿಂತ ಕಾರಿನಲ್ಲಿ ಆರು ಮಹಿಳೆಯರು ಮತ್ತು ಚಾಲಕ ಇದ್ದರು. ನಾಲ್ವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ರೆ ಚಾಲಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಇನ್ನೊಂದು ಕಾರಿನಲ್ಲಿ ಐವರು ಪುರುಷ ಪ್ರಯಾಣಿಕರಿದ್ದರು, ಅವರಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಒಟ್ಟು ಆರು ಜನರು ಸಾವನ್ನಪ್ಪಿದ್ದಾರೆ” ಎಂದರು.

ಶವಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ