ನಾಳೆ ಶಿವಮೊಗ್ಗದಲ್ಲಿ ಪ್ರಚಾರ ನಡೆಸಲಿರುವ ಪ್ರಧಾನಿ ಮೋದಿ! - Mahanayaka

ನಾಳೆ ಶಿವಮೊಗ್ಗದಲ್ಲಿ ಪ್ರಚಾರ ನಡೆಸಲಿರುವ ಪ್ರಧಾನಿ ಮೋದಿ!

pm modi
17/03/2024


Provided by

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 18ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದು, ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಈ ಬಗ್ಗೆ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್, ಯುವಕರು, ಮಹಿಳೆಯರು, ರೈತರು ಸೇರಿ ಸುಮಾರು 2.5 ಲಕ್ಷಕ್ಕೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಹೇಳಿದರು.

ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭಾಗವಹಿಸುತ್ತಾರೆ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಉಡುಪಿ ಮತ್ತು ಚಿಕ್ಕಮಗಳೂರಿನ ಅಭ್ಯರ್ಥಿಗಳು ವೇದಿಕೆ ಮೇಲೆ ಇರಲಿದ್ದಾರೆ. ಶಿವಮೊಗ್ಗದ ಸಂಸದ ಬಿ.ವೈ.ರಾಘವೇಂದ್ರ, ಚಿತ್ರದುರ್ಗದ ಸಂಸದ ನಾರಾಯಣಸ್ವಾಮಿ, ದಾವಣಗೆರೆಯ ಸಂಸದ ಸಿದ್ದೇಶ್ವರ್, ಗಾಯತ್ರಿ ಸಿದ್ದೇಶ್ವರ್, ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ನಾಯಕ ಕೋಟ ಶ್ರೀನಿವಾಸ ಪೂಜಾರಿ ವೇದಿಕೆ ಮೇಲೆ ಇರುತ್ತಾರೆ. ಮಂಗಳೂರಿನ ಅಭ್ಯರ್ಥಿ ಬೃಜೇಶ್ ಚೌಟ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಪ್ರಧಾನಿಯವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವರಾದ ಅರಗ ಜ್ಞಾನೇಂದ್ರ, ಸಿ.ಟಿ.ರವಿ, ಮಾಜಿ- ಹಾಲಿ ಶಾಸಕರು ವೇದಿಕೆಯಲ್ಲಿ ಇರುತ್ತಾರೆ ಎಂದರು. ವಿಶಿಷ್ಟ ಯೋಜನೆಯನ್ನು ಮಾಡಿದ್ದು, ಪ್ರಧಾನಿಯವರು ಬೃಹತ್ ಪೆಂಡಾಲ್‍ನಲ್ಲಿ ಜನರನ್ನು ವಾಹನದಲ್ಲಿ ವೀಕ್ಷಿಸುತ್ತ, ಕೈ ಬೀಸುತ್ತ ವೇದಿಕೆಗೆ ಬರುತ್ತಾರೆ ಎಂದು ಅವರು ತಿಳಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ