ಉಪಹಾರ ಸೇವಿಸಿದ ಬಳಿಕ ಅಸ್ವಸ್ಥರಾದ 50ಕ್ಕೂ ಹೆಚ್ಚು ಮಕ್ಕಳು

19/03/2024
ರಾಯಚೂರು: ಬೆಳಗ್ಗೆ ಉಪಹಾರ ಸೇವಿಸಿದ ನಂತರ ಸುಮಾರು 50 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಅರಕೇರದ ಬಾಲಕಿಯರ ವಸತಿ ನಿಲಯದಲ್ಲಿ ನಡೆದಿದೆ.
ಉಪಹಾರ ಸೇವನೆಯ ಬಳಿಕ ವಾಂತಿ ಭೇದಿ ಸೇರಿ ತಲೆ ಸುತ್ತಿನಿಂದ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ.
ಮಾಹಿತಿ ತಿಳಿದು ಆತಂಕಗೊಂಡ ಪೋಷಕರು ಸ್ಥಳಕ್ಕೆ ಆಗಮಿಸಿದ್ದಾರೆ. ಮಕ್ಕಳು ಅಸ್ವಸ್ಥರಾಗಿರುವುದನ್ನು ಕಂಡು ವಸತಿ ನಿಲಯದ ಸಿಬ್ಬಂದಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಸ್ಥಳಕ್ಕೆ ಡಿಹೆಚ್ಒ ಡಾ ಸುರೇಂದ್ರ ಬಾಬು ಭೇಟಿ ನೀಡಿದ್ದಾರೆ. ತೀವ್ರ ಅಸ್ವಸ್ಥಗೊಂಡ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth