ಡಿಎಂಕೆ, ತಮಿಳಿಗರ ಬಗ್ಗೆ ಸುಳ್ಳು ಹೇಳಿಕೆ: ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು - Mahanayaka

ಡಿಎಂಕೆ, ತಮಿಳಿಗರ ಬಗ್ಗೆ ಸುಳ್ಳು ಹೇಳಿಕೆ: ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

shobha karandlaje
20/03/2024


Provided by

ಬೆಂಗಳೂರು: ರಾಮೇಶ್ವರ ಕೆಫೆ ಬ್ಲಾಸ್ಟ್ ಹಿಂದೆ ತಮಿಳರು ಇದ್ದಾರೆ ಎಂಬ ಶೋಭಾ ಕರಂದ್ಲಾಜೆ ಅವರ ಸುಳ್ಳು ಹೇಳಿಕೆ ವಿರುದ್ಧ  ತಮಿಳುನಾಡಿನ ಆಡಳಿತರೂಢ ದ್ರಾವಿಡ ಮುನ್ನೇತ್ರ ಕಳಗಂ (DMK) ಪಕ್ಷ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್​​ ಹಿಂದೆ ತಮಿಳಿಗರು ಇದ್ದಾರೆ ಎಂದು ನಿನ್ನೆ ನಗರ್ತಪೇಟೆಗೆ ಭೇಟಿ ನೀಡಿದ ವೇಳೆ ಸಂಸದೆ ಶೋಭಾ ಕರದ್ಲಾಂಜೆ ಹೇಳಿಕೆ ನೀಡಿದ್ದರು.

ಶೋಭಾ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆ ಅಡಿಯಲ್ಲಿ ದೂರು ದಾಖಲಿಸುವಂತೆ ಡಿಎಂಕೆ ತನ್ನ ದೂರಿನಲ್ಲಿ ಉಲ್ಲೇಖಿಸಿದ್ದು, ಶೋಭಾ ಕರಂದ್ಲಾಜೆ ಅವರ ಭಾಷಣ, ತಮಿಳುನಾಡು ಕರ್ನಾಟಕದ ಜನರ ಮಧ್ಯೆ ಕೋಮು ದ್ವೇಷ ಸೃಷ್ಟಿಸುವಂತಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ತಮಿಳುನಾಡಿನಲ್ಲಿ ತರಬೇತಿ ಪಡೆದು, ಬಾಂಬ್ ಇಡಲು ಬೆಂಗಳೂರಿನ ರಾಮೇಶ್ವರಂ ಕೆಫೆಗೆ ಶಂಕಿತ ಬಂದಿದ್ದಾನೆ ಎಂದು ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದು, ಎನ್ ​​ಐಎ ತನಿಖೆ ನಡೆಯುತ್ತಿರುವ ಸಂದರ್ಭದಲ್ಲಿ ಈ ರೀತಿ ಹೇಳಿಕೆ ನೀಡಿದ್ದಾರೆ ಡಿಎಂಕೆ ಹೇಳಿದೆ.

ಇನ್ನೂ ಶೋಭಾ ಕರಂದ್ಲಾಜೆ ನೀಡಿದ ಹೇಳಿಕೆಯ ಬೆನ್ನಲ್ಲೇ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಶೋಭಾ ತನ್ನ ಹೇಳಿಕೆಯನ್ನು ಹಿಂಪಡೆದು ಕ್ಷಮೆ ಯಾಚಿಸಿ ಟ್ವೀಟ್ ಮಾಡಿದ್ದಾರೆ.

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಹಿಂದೆ ತಮಿಳಿಗರು ಇದ್ದಾರೆ ಎಂಬ ನನ್ನ ಹೇಳಿಕೆಯಿಂದ ತಮಿಳಿಗರಿಗೆ ನೋವಾಗಿದ್ದರೆ ನನ್ನ ಅಂತರಾಳದಿಂದ ನಾನು ಕ್ಷಮೆಯನ್ನು ಕೇಳುತ್ತೇನೆ. ಹಾಗೂ ನನ್ನ ಹೇಳಿಕೆಯನ್ನು ಹಿಂಪಡೆಯುತ್ತೇನೆ ಎಂದಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ