ಕುಸಿದ ಎರಡು ಅಂತಸ್ತಿನ ಕಟ್ಟಡ: ಇಬ್ಬರು ಸಾವು, ಓರ್ವನಿಗೆ ಗಾಯ

ದೆಹಲಿಯ ಕಬೀರ್ ನಗರ ಪ್ರದೇಶದಲ್ಲಿ ಹಳೆಯ ನಿರ್ಮಾಣ ಕಟ್ಟಡ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ, ಘಟನೆಯ ಬಗ್ಗೆ ಇಂದು ಮುಂಜಾನೆ 2.16 ರ ಸುಮಾರಿಗೆ ಪೊಲೀಸರಿಗೆ ಕರೆ ಬಂದಿದ್ದು, ನಂತರ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.
ಎಎನ್ಐ ಜೊತೆ ಮಾತನಾಡಿದ ಸ್ಟೇಷನ್ ಆಫೀಸರ್ ಅನೂಪ್, ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರಿಗೆ ಕರೆ ಬಂದ ಕೂಡಲೇ ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪಿದವು. ಮೂವರು ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಹೂತುಹೋಗಿದ್ದರು ಎಂದು ಅವರು ಹೇಳಿದರು.
ಹರ್ಷದ್ (30) ಮತ್ತು ತೌಹಿದ್ (20) ಎಂಬ ಇಬ್ಬರು ಕಾರ್ಮಿಕರು ಜಿಟಿಬಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದ್ದು, ಇನ್ನೊಬ್ಬ ಕಾರ್ಮಿಕ ರೆಹಾನ್ (22) ಗಂಭೀರ ಮತ್ತು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಈಶಾನ್ಯ ಡಿಸಿಪಿ ಜಾಯ್ ಟಿರ್ಕಿ ತಿಳಿಸಿದ್ದಾರೆ. ಈ ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth