ನಮ್ಮ ಮೆಟ್ರೋ ಬರುತ್ತಿದ್ದ ವೇಳೆ ಹಳಿಗೆ ಹಾರಿದ ವ್ಯಕ್ತಿಯ ದಾರುಣ ಸಾವು

ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮತ್ತೊಂದು ಅನಾಹುತ ಸಂಭವಿಸಿದ್ದು, ಮೆಟ್ರೋ ಬರುತ್ತಿದ್ದ ವೇಳೆ ಹಳಿಗೆ ವ್ಯಕ್ತಿಯೋರ್ವ ಜಿಗಿದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಅತ್ತಿಗುಪ್ಪೆ , ಮೆಟ್ರೋ ಸ್ಟೇಷನ್ ನಲ್ಲಿ ಈ ಘಟನೆ ನಡೆದಿದೆ. ಮೆಟ್ರೋ ಬರುತ್ತಿರುವುದನ್ನು ಗಮನಿಸಿದ ವ್ಯಕ್ತಿ ಟ್ರ್ಯಾಕ್ ಗೆ ಹಾರಿದ್ದಾನೆ. ಪರಿಣಾಮವಾಗಿ ಆತ ಗಂಭೀರವಾಗಿ ಗಾಯಗೊಂಡಿದ್ದ.
ತಕ್ಷಣವೇ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಮೆಟ್ರೋ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ವ್ಯಕ್ತಿಯ ಗುರುತು ಪತ್ತೆ ಹಚ್ಚುವ ಕಾರ್ಯವನ್ನು ಪೊಲೀಸರು ನಡೆಸುತ್ತಿದ್ದಾರೆ.
ಇತ್ತೀಚೆಗೆ ಮೆಟ್ರೋ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಿದೆ. ನಿನ್ನೆ ಮೆಟ್ರೋ ಸಿಬ್ಬಂದಿಯೋರ್ವ ಮಹಿಳೆಯ ಎದುರು ಅಸಭ್ಯವಾಗಿ ವರ್ತಿಸಿರುವ ಆರೋಪ ಕೇಳಿ ಬಂದಿತ್ತು. ಇದೀಗ ವ್ಯಕ್ತಿಯೋರ್ವ ಹಳಿಗೆ ಹಾರಿ ಸಾವನ್ನಪ್ಪಿದ್ದಾನೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth