ಬಿಗ್‌ ನ್ಯೂಸ್‌: ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅರೆಸ್ಟ್ - Mahanayaka
8:57 AM Wednesday 20 - August 2025

ಬಿಗ್‌ ನ್ಯೂಸ್‌: ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅರೆಸ್ಟ್

aravind kejrival
21/03/2024


Provided by

ನವದೆಹಲಿ: ಅಬಕಾರಿ ನೀತಿ ಪರಿಷ್ಕರಣೆಯಲ್ಲಿನ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ಗುರುವಾರ ನಿರಾಕರಿಸಿದ್ದು ಇದರ ಬೆನ್ನಲ್ಲೇ ಇಡಿ ಅಧಿಕಾರಿಗಳ ತಂಡ ದೆಹಲಿ ಮುಖ್ಯಮಂತ್ರಿ ನಿವಾಸಕ್ಕೆ ತೆರಳಿ ಮತ್ತೊಂದು ಸಮನ್ಸ್ ಜಾರಿ ಮಾಡಿ, ವಿಚಾರಣೆ ನಡೆಸಿ ಇದೀಗ ಬಂಧಿಸಿದೆ.

ಕೇಜ್ರಿವಾಲ್‌ ಬಂಧನದ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ದೆಹಲಿ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ ಮತ್ತು ಸಿವಿಲ್ ಲೈನ್ಸ್‌ನಲ್ಲಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಬಳಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ. ಬ್ಯಾರಿಕೇಡ್‌ಗಳನ್ನು ಹಾಕಲಾಗಿದ್ದು, ಸಹಾಯಕ ಪೊಲೀಸ್ ಆಯುಕ್ತರ ಶ್ರೇಣಿಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ದೆಹಲಿ ಸಿಎಂ ನಿವಾಸದ ಬಳಿ ಮತ್ತು ಇಡಿ ಕಚೇರಿ ಬಳಿ ದೆಹಲಿ ಪೊಲೀಸ್ ಸಿಬ್ಬಂದಿಯೊಂದಿಗೆ RAF ಮತ್ತು CRPF ಪಡೆಗಳನ್ನು ನಿಯೋಜಿಸಲಾಗಿದೆ. ಸಿಎಂ ನಿವಾಸದ ಬಳಿ ಮತ್ತು ಇಡಿ ಕಚೇರಿ ಬಳಿ ಎಎಪಿ ಕಾರ್ಯಕರ್ತರು ಸೇರುವ ನಿರೀಕ್ಷೆ ಇರುವು ಹಿನ್ನೆಲೆಯಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ