5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಅನುಮತಿ

22/03/2024
ಬೆಂಗಳೂರು: ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ.
ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಆದೇಶ ನೀಡಿದೆ.
ಅಲ್ಲದೆ, ಸ್ಥಗಿತಗೊಂಡಿರುವ ಪರೀಕ್ಷೆ ಮುಂದುವರಿಸಲು ಸೂಚನೆ ನೀಡಿದೆ. ಮುಂದಿನ ಶೈಕ್ಷಣಿಕ ವರ್ಷದ ಪರೀಕ್ಷೆಯ ವೇಳೆ ಸಂಬಂಧಪಟ್ಟವರೊಂದಿಗೆ ಸಮಾಲೋಚಿಸುವಂತೆ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth