ಲಾರಿ-ಬೈಕ್ ನಡುವೆ ಭೀಕರ ಅಪಘಾತ: ಮಹಿಳೆ ಸಾವು

23/03/2024
ಚಿಕ್ಕಮಗಳೂರು : ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ತಂಗಲಿ ಬಳಿ ನಡೆದಿದೆ.
ದಾವಣಗೆರೆ ಎಎಸ್ಪಿ ಗನ್ ಮ್ಯಾನ್ ಜಯಣ್ಣ ಹಾಗೂ ಆತನ ಪತ್ನಿ ಸುಮಾ(25) ಬೈಕಿನಲ್ಲಿ ರೈಲ್ವೆ ಸ್ಟೇಷನ್ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಒನ್ ವೇ ನಲ್ಲಿ ಬಂದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ಜಯಣ್ಣರವರ ಪತ್ನಿ ಸುಮಾ ಮೃತಪಟ್ಟಿದ್ದಾರೆ. ಜಯಣ್ಣನ ಸ್ಥಿತಿ ಚಿಂತಾಜನಕವಾಗಿದ್ದು ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth