ದಿಲ್ಲಿ ಸಿಎಂ ಅರೆಸ್ಟ್: ಕೇಜ್ರಿವಾಲ್ ರನ್ನು ನ್ಯಾಯಯುತವಾಗಿ ವಿಚಾರಣೆ ನಡೆಸಲಾಗುತ್ತಾ.? ಜರ್ಮನಿಯ ವಿದೇಶಾಂಗ ಸಚಿವಾಲಯ ಪ್ರಶ್ನೆ

ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ನ್ಯಾಯಯುತ ಹಾಗೂ ನಿಷ್ಪಕ್ಷಪಾತ ವಿಚಾರಣೆ ಎದುರಿಸಲಿದ್ದಾರೆ ಎಂದು ತಾನು ನಿರೀಕ್ಷಿಸುತ್ತಿದ್ದೇನೆ ಎಂದು ಜರ್ಮನಿಯ ವಿದೇಶಾಂಗ ಸಚಿವಾಲಯವು ಹೇಳಿಕೆ ನೀಡಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ “ಜರ್ಮನಿ ರಾಯಭಾರಿಯ ಹೇಳಿಕೆಯು ಭಾರತದ ಆಂತರಿಕ ವಿಚಾರಗಳಲ್ಲಿನ ನಿರ್ಲಜ್ಜ ಹಸ್ತಕ್ಷೇಪವಾಗಿದೆ” ಎಂದಿದೆ.
ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಅರವಿಂದ್ ಕೇಜ್ರಿವಾಲ್ ಕುರಿತು ಜರ್ಮನಿಯ ರಾಯಭಾರಿಯು ನೀಡಿರುವ ಹೇಳಿಕೆಯ ವಿರುದ್ಧ ಭಾರತವಿಂದು ಪ್ರತಿಭಟನೆ ದಾಖಲಿಸಿದೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಇಂದು ತನ್ನ ಅಧಿಕೃತ ಪ್ರತಿಭಟನೆಯನ್ನು ದಾಖಲಿಸಲು ಜರ್ಮನಿ ರಾಯಭಾರ ಕಚೇರಿಯ ಉಪ ಕಾರ್ಯಾಚರಣೆ ಮುಖ್ಯಸ್ಥ ಜಾರ್ಜ್ ಎಂಝ್ವೀಲರ್ ರನ್ನು ಕರೆಸಿಕೊಂಡಿತ್ತು. ಭಾರತವು ಪ್ರಜಾಸತ್ತಾತ್ಮಕ ದೇಶವಾಗಿರುವುದರಿಂದ ಅರವಿಂದ್ ಕೇಜ್ರಿವಾಲ್ ನ್ಯಾಯಯುತ ಹಾಗೂ ನಿಷ್ಪಕ್ಷಪಾತ ವಿಚಾರಣೆಯನ್ನು ಎದುರಿಸಲಿದ್ದಾರೆ ಎಂದು ತಾನು ನಿರೀಕ್ಷಿಸುತ್ತಿದ್ದೇನೆ ಎಂದು ಜರ್ಮನಿಯ ವಿದೇಶಾಂಗ ಸಚಿವಾಲಯವು ಹೇಳಿಕೆ ನೀಡಿದ ಕೆಲ ಗಂಟೆಗಳ ನಂತರ ಭಾರತವು ಈ ಪ್ರತಿಭಟನೆಯನ್ನು ದಾಖಲಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth