ಉರ್ದು ಶಾಲೆಯಲ್ಲಿ ಕೋತಿಯ ಉಪಟಳ: ವಿದ್ಯಾರ್ಥಿಗಳು, ಶಿಕ್ಷಕರು ಕಂಗಾಲು

ದಾವಣಗೆರೆ: ಕೋತಿಯೊಂದರ ಉಪಟಳದಿಂದ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಬಳಿಯ ಹೊಸೂರು ಉರ್ದು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಬೇಸತ್ತು ಹೋಗಿರುವ ಘಟನೆ ನಡೆದಿದೆ.
ಈ ಶಾಲೆಯಲ್ಲಿ ದಿನದಿಂದ ದಿನಕ್ಕೆ ಕೋತಿಗಳ ಕಾಟ ಹೆಚ್ಚಾಗುತ್ತಿದ್ದು, ಈಗಾಗಲೇ ನಾಲ್ವರು ವಿದ್ಯಾರ್ಥಿಗಳ ಮೇಲೆ ಕೋತಿ ದಾಳಿ ನಡೆಸಿದ್ದು, ಪುಟಾಣಿ ಮಕ್ಕಳಿಗೆ ಕಚ್ಚಿ ಗಾಯಗೊಳಿಸಿದೆ.
ಕಳೆದ ಮೂರು ತಿಂಗಳುಗಳಿಂದ ಕೋತಿಯ ಕಾಟದಿಂದ ಮಕ್ಕಳು, ಶಾಲಾ ಸಿಬ್ಬಂದಿ ಕಂಗಾಲಾಗಿದ್ದಾರೆ. ಕೆಲ ದಿನಗಳ ಹಿಂದೆ ಹೇಗೋ ಈ ಕೋತಿಯನ್ನು ಹಿಡಿದಿದ್ದ ವಿದ್ಯಾರ್ಥಿಗಳು ಸೂಳೆಕೆರೆ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದರು.
ಆದರೆ ಆ ಕೋತಿ ಮತ್ತೆ ಶಾಲೆಗೆ ಬಂದಿದ್ದು, ವಿದ್ಯಾರ್ಥಿಗಳ ಮೇಲೆ ಮತ್ತೆ ದಾಳಿ ನಡೆಸುತ್ತಿದೆ. ಈ ಕೋತಿಯನ್ನು ಹಿಡಿದು ಅರಣ್ಯ ಪ್ರದೇಶಕ್ಕೆ ಬಿಡುವಂತೆ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪಾಲಕರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth